LATEST NEWS
ಮೇ 29 ರಂದು ಕರಾವಳಿಯಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ
ಮೇ 29 ರಂದು ಕರಾವಳಿಯಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ
ಮಂಗಳೂರು ಮೇ 26 – ಮೆಕುನು ಚಂಡಮಾರುತದ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಭಾರಿ ಬಿರುಗಾಳಿ ಸಹಿತ ಮಳೆಯಾಗಿದೆ. ಜಿಲ್ಲೆಯ ಮಂಗಳೂರು, ಕಡಬ , ವಿಟ್ಲ ಮೊದಲಾದ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆ ಯಾಗಲಿದೆ. 29 ರಂದು 115 ಮಿ ಮಿ ಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮೇ 30 ತನಕ ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೆ ಮುಂದಿನ ಆದೇಶದ ತನಕ ಮೀನುಗಾರರು ಸಮುದ್ರಕ್ಕೆ ಇಳಿಯಬಾರದೆಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.