LATEST NEWS
ಜೂನ್ 12ರವರೆಗೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ

ಮಂಗಳೂರು ಜೂನ್ 08: ಕರಾವಳಿಯಲ್ಲಿ ಮುಂಗಾರು ಚುರುಕಾಗಿದ್ದು, ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಈ ನಡುವೆ ಜೂನ್ 12 ರವರೆಗೆ ರಾಜ್ಯ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಮುಂಗಾರು ಮಳೆ ವೇಗ ಪಡೆದುಕೊಂಡಿದ್ದು , ಉತ್ತಮ ಮಳೆಯಾಗುತ್ತಿದೆ. ಇಂದು ಮುಂಜಾನೆಯಿಂದಲೇ ಮಂಗಳೂರಿನಲ್ಲಿ ಮಳೆಯಾಗುತ್ತಿದೆ. ಈ ನಡುವೆ ಜೂನ್ 12 ರವರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆಯೊಂದಿಗೆ ಪ್ರತ್ಯೇಕ ಭಾರೀ ಅತಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಹಾವೆೇರಿ, ಕಲಬುರಗಿ, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ / ಗುಡುಗು ಸಹಿತ ಗಾಳಿ (30-40 kmph) ಸಂಭವವಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಚಂಡಮಾರುತದ ಹವಾಮಾನವು ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೆೇಗದಲ್ಲಿ 65 ಕಿ.ಮೀ ವರೆಗೆ ಬೀಸುವ ಗಾಳಿಯೊಂದಿಗೆ ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.