LATEST NEWS
ಮುಂದಿನ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು ಸೆಪ್ಟೆಂಬರ್ 1 : ಕಳೆದ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದೇಶದಲ್ಲಿ ಆಗಸ್ಟ್ ತಿಂಗಳಿನಲ್ಲಿ ವಾಡಿಕೆಗಿಂತ ಅಧಿಕ ಪ್ರಮಾಣದ ಮಳೆಯಾಗಿದೆ. ಕಳೆದ 120 ವರ್ಷಗಳ ಅವಧಿಯಲ್ಲಿ ಸುರಿದ ಮಳೆ ಗರಿಷ್ಠ ಪ್ರಮಾಣದ ಮಳೆ ಸುರಿದಿದ್ದು, ಶೇ.27 ರಷ್ಟು ಅಧಿಕ ಪ್ರಮಾಣದ ಮಳೆ ಬಿದ್ದಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಮೂರು ದಿನಗಳ ಕಾಲ ಉತ್ತರ ಭಾರತ, ಈಶಾನ್ಯ ರಾಜ್ಯಗಳು ಹಾಗೂ ದಕ್ಷಿಣ ಭಾರತದಲ್ಲಿ ಭಾರೀ ಮಳೆಯಾವ ಸಾಧ್ಯತೆ ಇದೆ.
