Connect with us

    LATEST NEWS

    ಕರಾವಳಿಯಲ್ಲಿ ನಾಳೆ ಭಾರೀ ಮಳೆ ಎಚ್ಚರಿಕೆ

    ಕರಾವಳಿಯಲ್ಲಿ ನಾಳೆ ಭಾರೀ ಮಳೆ ಎಚ್ಚರಿಕೆ

    ಮಂಗಳೂರು ಜೂನ್ 12: ಕರಾವಳಿ ಕರ್ನಾಟಕ ನಾಳೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

    ಇಂದು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಈ ಮುನ್ಸೂಚನೆ ನೀಡಲಾಗಿದ್ದು, ಕರ್ನಾಟಕದ ಕರಾವಳಿ, ಕೇರಳದ ಕೆಲವು ಪ್ರದೇಶಗಳಲ್ಲಿ ಜೂನ್ 12ರಂದು ಭಾರೀ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಕೇರಳ ಹಾಗೂ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಸಮುದ್ರದ ರಭಸ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿತ್ತು. ಆದರೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹರಿದು ಬಂದ ನೀರಿನಿಂದಾಗಿ ಉಪ್ಪಿನಂಗಡಿ – ಸುಬ್ರಹ್ಮಣ್ಯ ಸಂಪರ್ಕ ರಸ್ತೆಯ ಹೊಸ್ಮಠ ಸೇತುವೆ ಮುಳುಗಡೆಯಾಗಿದೆ. ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ ನದಿ ತುಂಬಿದ್ದು, ನೀರಿನ ಮಟ್ಟ ಹೆಚ್ಚಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *