Connect with us

    DAKSHINA KANNADA

    ದ.ಕ ಜಿಲ್ಲೆಯಲ್ಲಿ ಭಾರೀ ಮಳೆ : 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ

    ಮಂಗಳೂರು, ಜುಲೈ 04: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4 ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

    ಕರಾವಳಿಯಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 4 ದಿನ ಆರು ಜಿಲ್ಲೆಗಳಲ್ಲಿ ಭಾರತೀಯ ಹವಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

    ದ.ಕ.ದಲ್ಲಿ ತಹಶೀಲ್ದಾರ್‌ಗೆ ಶಾಲಾ-ಕಾಲೇಜಿಗೆ ರಜೆ ಘೋಷಿಸುವ ಅಧಿಕಾರ ನೀಡಿ ಡಿಸಿ ಆದೇಶಿಸಿದ್ದಾರೆ. ಉಳಿದ ತಾಲೂಕಿನಲ್ಲಿ ಮಳೆ ಪರಿಸ್ಥಿತಿ ನೋಡಿ ರಜೆ ನೀಡಲು ಸೂಚಿಸಲಾಗಿದ್ದು, ಕಾಸರಗೋಡು ಜಿಲ್ಲೆಯಲ್ಲಿ ಇಂದು ರಜೆ ಘೋಷಿಸಲಾಗಿದೆ

    Share Information
    Advertisement
    Click to comment

    You must be logged in to post a comment Login

    Leave a Reply