Connect with us

    DAKSHINA KANNADA

    ಕರಾವಳಿಯಲ್ಲಿ ಭಾರಿ ಮಳೆ: ಸರ್ವ ಸನ್ನದ್ಧರಾಗಿರಲು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವುದರಿಂದ ಜಿಲ್ಲಾಡಳಿತ ಸಂಪೂಣ೯ ಸನ್ನದ್ಧವಾಗಿರಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸೂಚಿಸಿದ್ದಾರೆ.


    ಅವರು ಮಂಗಳವಾರ ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿ, ಜಿಲ್ಲೆಯ ಮಳೆ ಹಾನಿ ಪರಿಸ್ಥಿತಿಯನ್ನು ಪರಾಮಶೆ೯ ನಡೆಸಿದರು. ತುತು೯ ಸಂದಭ೯ದಲ್ಲಿ ಕಾಯಾ೯ಚರಣೆಗೆ ತುತು೯ ಸ್ಪಂದನಾ ಪಡೆ ಸದಾ ಸನ್ನದ್ಧ ವಾಗಿರಬೇಕು. ಮುಳುಗಡೆ ಪ್ರದೇಶದ ನಿವಾಸಿಗಳನ್ನು ಆದ್ಯತೆಯಲ್ಲಿ ಸ್ಥಳಾಂತರಿಸಬೇಕು ಎಂದು ಅವರು ತಿಳಿಸಿದರು.

    ನದಿ ಪಾತ್ರ ಹಾಗೂ ಕಡಲಕೊರತೆ ಪ್ರದೇಶಗಳಲ್ಲಿ ಪರಿಹಾರ ಕಾಯಾ೯ಚರಣೆಗೆ ಸುಸಜ್ಜಿತ ತಂಡ ಇಡಬೇಕು. ಭೂಕುಸಿತದಿಂದ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾದರೆ, ಶೀಘ್ರವಾಗಿ ತೆರವುಗೊಳಿಸಬೇಕು. ವಿದ್ಯುತ್ ಕಂಬಗಳು ಬಿದ್ದ ಪ್ರಕರಣಗಳಲ್ಲಿ ಕೂಡಲೇ ಕ್ರಮ ಕೈಗೊಂಡು ವಿದ್ಯುತ್ ಪುನರ್ ಸ್ಥಾಪಿಸಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದರು.

    ಸಾವ೯ಜನಿಕ, ಜನ ಜಾನುವಾರು ಜೀವ ರಕ್ಷಣೆಗೆ ಆದ್ಯತೆ ನೀಡಬೇಕು. ಎಲ್ಲ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಮಳೆ ಪರಿಸ್ಥಿತಿ ಮೇಲೆ ನಿಗಾ ಇಡಬೇಕು ಎಂದು ಉಸ್ತುವಾರಿ ಸಚಿವರು ಸೂಚಿಸಿದರು.
    ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಪರಿಸ್ಥಿತಿ ಬಗ್ಗೆ ನೆರೆಯ ಜಿಲ್ಲೆಗಳೊಂದಿಗೆ ಸಂಪಕ೯ದಲ್ಲಿದ್ದು, ಸಮನ್ವಯತೆಯಿಂದ ಕಾಯಾ೯ಚರಿಸುವಂತೆ ಸಚಿವರು ತಿಳಿಸಿದರು. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಜಿಲ್ಲೆಯಲ್ಲಿ ಮಳೆ ಪರಸ್ಥಿತಿ ಬಗ್ಗೆ ಸಚಿವರಿಗೆ ವಿವರ ನೀಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply