Connect with us

    LATEST NEWS

    ಕರಾವಳಿ ಪ್ರದೇಶದಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ – ಹವಮಾನ ಇಲಾಖೆ

    ಕರಾವಳಿ ಪ್ರದೇಶದಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ – ಹವಮಾನ ಇಲಾಖೆ

    ಮಂಗಳೂರು ಎಪ್ರಿಲ್ 15: ದಕ್ಷಿಣ ಒಳನಾಡಿನಲ್ಲಿ ಟ್ರಫ್‌ (ದಟ್ಟ ಮೋಡಗಳ ಸಾಲು) ಮುಂದುವರೆದಿರುವ ಹಿನ್ನಲೆಯಲ್ಲಿ ಇಂದು ಮತ್ತೆ ನಾಳೆ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ದಟ್ಟ ಮೊಡಗಳ ಸಾಲಿನಿಂದಾಗಿ ಕಳೆದೆರಡು ದಿನಗಳಿಂದ ರಾಜ್ಯದೆಲ್ಲೆಡೆ ಸಣ್ಣ ಪ್ರಮಾಣದ ಮಳೆಯಾಗುತ್ತಿದೆ. ಟ್ರಫ್‌ನ ತೀವ್ರತೆ ಹೆಚ್ಚಾಗಿರುವುದರಿಂದ ಭಾನುವಾರ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರ ತೀರದಲ್ಲಿ ಗಾಳಿಯ ವೇಗ 32KMPH ಇರಲಿದೆ ಎಂದು ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಇಂದು ಬೆಳಿಗ್ಗೆ ದಕಿಣಕನ್ನಡ ಜಿಲ್ಲೆಯ ಹಲವು ಕಡೆ ಗುಡಗು ಸಿಡಿಲು ಸಹಿತ ಬಾರಿ ಮಳೆಯಾಗಿದೆ. ಕಳೆದು ಒಂದು ವಾರದಿಂದ ಬಿಸಿಲಿನ ತಾಪಕ್ಕೆ ಹೈರಾಣಾಗಿದ್ದ ಮಂಗಳೂರು ಜನತೆಗೆ ಇಂದು ಬೆಳಿಗ್ಗೆ ಸುರಿದ ಮಳೆ ಪರಿಸರವನ್ನು ತಂಪಾಗಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply