LATEST NEWS
ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಆರೆಂಜ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಆರೆಂಜ್ ಅಲರ್ಟ್ ಘೋಷಣೆ
ಮಂಗಳೂರು ಮೇ.31: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆಗಳು ಇರುವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆ ಮೇರೆಗೆ ಜಿಲ್ಲಾಡಳಿತ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.
ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಕರಾವಳಿ ಭಾಗದಲ್ಲಿ ಮುಂದಿನ 24 ಗಂಟೆಗಳ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, 115 ಮಿಲಿ ಮೀಟರ್ ನಿಂದ 204 ಮಿಮಿ ಮೀಟರ್ ವರೆಗೆ ಗಾಳಿ ಸಿಡಿಲಿನ ಮಳೆಯಾಗುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಆದ್ದರಿಂದ ಜಿಲ್ಲೆಯ ಜನ ಎಚ್ಚರಿಕೆಯಿಂದ ಇರುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಜನತೆಗೆ ಮನವಿ ಮಾಡಿದೆ. ಈಗಾಗಲೇ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ.