LATEST NEWS
ಬಿರುಗಾಳಿ ಸಹಿತ ಮಳೆ – ಕಾರಿನ ಮೇಲೆ ಬಿದ್ದ ಬೃಹತ್ ಗಾತ್ರದ ಮರ
ಬಿರುಗಾಳಿ ಸಹಿತ ಮಳೆ – ಕಾರಿನ ಮೇಲೆ ಬಿದ್ದ ಬೃಹತ್ ಗಾತ್ರದ ಮರ
ಪುತ್ತೂರು ಅಗಸ್ಟ್ 13: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಸಂಜೆ ಬೀಸಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಹಲವಾರು ಮರಗಳು ನೆಲಕ್ಕುರುಳಿದ್ದು , ಜಿಲ್ಲೆಯ ಹಲವು ಕಡೆಗಳಲ್ಲಿ ಭಾರಿ ನಷ್ಟ ಸಂಭವಿಸಿದೆ.
ಮಂಗಳೂರಿನ ನಗರದ ಶಕ್ತಿನಗರ ಎಂಬಲ್ಲಿ ಭಾರೀ ಗಾಳಿಗೆ ಮರವೊಂದು ಬುಡಮೇಲಾಗಿದೆ. ಪುತ್ತೂರಿನ ಕಡಬ ಪರಿಸರದಲ್ಲಿ ಬೀಸಿದ ಬಾರೀ ಬಿರುಗಾಳಿಗೆ ಇಚಿಲಂಪ್ಪಾಡಿಯಲ್ಲಿ ಚಲಿಸುವ ಕಾರಿನ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದು ಭಾರಿ ನಷ್ಟ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪಾರಾಗಿದ್ದಾರೆ.
ಜಿಲ್ಲೆಯ ಹಲವು ಕಡೆಗಳಲ್ಲಿ ಮನೆಯ ಮೇಲೆ ಮರಗಳು ಬಿದ್ದಿದ್ದು, ವಿದ್ಯುತ್ ಕಂಬಗಳಿಗೂ ಹಾನಿಯುಂಟಾಗಿದ್ದು, ಲಕ್ಷಾಂತರ ರೂಪಾಯಿಗಳ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಈ ನಡುವೆ ಮುಂದಿನ 24 ಗಂಟೆಗಳ ಕಾಲ ಜಿಲ್ಲೆಯಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ತೀರದಲ್ಲೂ ಭಾರಿ ಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
VIDEO