ಉಡುಪಿ ಅಗಸ್ಟ್ 19 : ಬೈಕ್ ಒಂದನ್ನು ಓವರ್ ಟೆಕ್ ಮಾಡುವ ಭರದಲ್ಲಿ ಕಾರೊಂದು ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ನಾಡ್ಪಾಲು ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕನ್ನು ಕಾರೊಂದು ಓವರ್ ಟೇಕ್ ಮಾಡುವಾಗ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರುಗಳು ಹಾಗೂ ಬೈಕ್ ನುಜ್ಜುಗುಜ್ಜಾಗಿವೆ. ಸ್ಥಳಕ್ಕೆ ಹೆಬ್ರಿ ಪಿಎಸ್ಐ ಮಹೇಶ್ ಟಿಎಂ ಭೇಟಿ ನೀಡಿದ್ದು ಪ್ರಕರಣ ದಾಖಲಾಗಿದೆ. ಅಪಘಾತದಿಂದ ಉಡುಪಿ ಹೆಬ್ರಿ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತ್ತು.