LATEST NEWS
ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಲಾರಿ – ಕಾರ್ಮಿಕ ಸಾವು
ಹೆಬ್ರಿ ನವೆಂಬರ್ 24: ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಲಾರಿ ಹರಿದ ಪರಿಣಾಮ ಓರ್ವ ಕಾರ್ಮಿಕ ಸಾವನಪ್ಪಿದ ಘಟನೆ ಹೆಬ್ರಿಯ ಸೊಮೇಶ್ವರ್ ಪೆಟ್ರೋಲ್ ಬಂಕ್’ನಲ್ಲಿ ನಡೆದಿದೆ.
ಮೃತರನ್ನು ಲಾರಿ ಕಾರ್ಮಿಕನನ್ನು ಸಾಗರ ತಾಲೂಕಿನ ಕೊರ್ಲಿ ಕೊಪ್ಪ ನಿವಾಸಿ ಶಿವರಾಜ್ ಎಂದು ಗುರುತಿಸಲಾಗಿದೆ. ಹೆಬ್ರಿ ಸಮೀಪದ ಸೋಮೇಶ್ವರ ಪೆಟ್ರೋಲ್ ಬಂಕ್ ಆವರಣದಲ್ಲಿ ಮುಂಜಾನೆ ಈ ದುರ್ಘಟನೆ ವರದಿಯಾಗಿದೆ. ಲಾರಿ ಕಾರ್ಮಿಕ ಶಿವರಾಜ್ ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದರು.
ಈ ವೇಳೆ ಡಿಸೇಲ್ ತುಂಬಿಸಿ ಟಿಪ್ಪರ್ ಚಾಲಕ,ಮಲಗಿದ್ದ ಶಿವರಾಜ್ ಮೇಲೆಯೇ ವಾಹನ ಚಲಾಯಿಸಿಕೊಂಡು ಹೋಗಿದ್ದಾನೆ. ಪರಿಣಾಮ ಶಿವರಾಜ್ ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಹೆಬ್ರಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶಿವರಾಜ್ ಮೃತಪಟ್ಟಿದ್ದಾರೆ.
ಮಹೇಂದ್ರ ಅವರಿಗೆ ಗಂಭೀರ ಗಾಯವಾಗಿದೆ. ಹೆಬ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟಿಪ್ಪರ್ ಚಾಲಕ ಆದಿತ್ಯ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.