Connect with us

    LATEST NEWS

    ಹೆಬ್ರಿ – ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಶಿಕ್ಷಕರು ಬಲಿ…!!

    ಹೆಬ್ರಿ ಜೂನ್ 11 : ಕಾರು ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಶಿಕ್ಷಕರು ಸಾವನಪ್ಪಿರುವ ಘಟನೆ ಸೀತಾನದಿ ಜಕ್ಕನಮಕ್ಕಿ ಬಳಿ ನಡೆದಿದೆ.

    ಮೃತರನ್ನು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮ ಶೇಖರ ಎನ್ನಲಾಗಿದೆ. ಅಪಘಾತದಲ್ಲಿ ಮತ್ತೊಬ್ಬ ಶಿಕ್ಷಕನ ಪರಿಸ್ಥಿತಿ ಗಂಭಿರವಾಗಿದ್ದು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ. ಅಪಘಾತದ ತೀವ್ರತೆಯಿಂದ ಬಸ್ ನ ಒಳಗೆ ಸಿಲುಕಿದ್ದ ಕಾರನ್ನು ಹೊರತರಲು ಹರಸಾಹಸ ಪಡಬೇಕಾಯಿತು. ಅಂಬುಲೆನ್ಸ್ ಸಿಗದೆ ಯಾರು ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆ ಸೇರಿಸಿದರು. ತುರ್ತು ಚಿಕಿತ್ಸೆ ಸಿಗದೆ ಇಬ್ಬರು ಮೃತಪಟ್ಟಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply