Connect with us

    KARNATAKA

    ಹೆಬ್ರಿ: ಆಗುಂಬೆ ಘಾಟಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಬಿರುಕು

    ಉಡುಪಿ, ನವೆಂಬರ್ 18: ಕರಾವಳಿ ಹಾಗೂ ಮಲೆನಾಡು ಭಾಗವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿರುವ ಆಗುಂಬೆ ಘಾಟಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಬಿರುಕುಬಿಟ್ಟಿದ್ದು, ಕುಸಿಯುವ ಭೀತಿ ಎದುರಾಗಿದೆ. ಹೆಬ್ರಿ ಹಾಗೂ ಆಗುಂಬೆ ಪರಿಸರದಲ್ಲಿ ನಿರಂತರ ಸುರಿದ ಭಾರಿ ಮಳೆಗೆ ಘಾಟಿಯ ಮಣ್ಣು ಸಡಿಲಗೊಂಡಿದ್ದು, ಅಲ್ಲಲ್ಲಿ ರಸ್ತೆ ಬಿರುಕುಬಿಟ್ಟಿದೆ.

    ಘಾಟಿಯ 12 ಹಾಗೂ 13ನೇ ತಿರುವಿನ ಮಧ್ಯೆಯ ರಸ್ತೆ ಬಿರುಕು ಬಿಟ್ಟಿದ್ದು, ಕುಸಿಯುವ ಭೀತಿ ಎದುರಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. 2 ವರ್ಷದ ಹಿಂದೆ ಘಾಟಿಯಲ್ಲಿ ರಸ್ತೆ ಕುಸಿದು 1 ತಿಂಗಳು ಸಂಚಾರ ಬಂದ್ ಆಗಿತ್ತು. ಈ ವರ್ಷ ಸಮಸ್ಯೆ ಮರುಕಳಿಸದಂತೆ ಅಧಿಕಾರಿಗಳು ಎಚ್ಚರವಹಿಸಬೇಕು.

    ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಸರಕುಗಳನ್ನು ಕೊಂಡೊಯ್ಯುವ ಭಾರಿ ವಾಹನಗಳ ಸಂಚಾರದಿಂದ ರಸ್ತೆ ಕುಸಿಯುವ ಭೀತಿ ಎದುರಾಗಿದ್ದು, ಈ ಬಗ್ಗೆ ತುರ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *