ಹೆಬ್ರಿ ಡಿಸೆಂಬರ್ 18: ಪ್ರವಾಸಿ ತಾಣ ಕೂಡ್ಲು ಫಾಲ್ಸ್ ನ ಬಂಡೆಯ ಮೇಲಿನಿಂದ ಬಿದ್ದು ಯುವಕನೊಬ್ಬ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಉಡುಪಿಯ ಕೊಂಜಾಡಿ ಮೂಲದ ಬೆಂಗಳೂರು ನಿವಾಸಿ ಸವಿತಾ ಪಿ. ಶೆಟ್ಟಿ ಎಂಬವರ ಮಗ ಮನ್ವಿತ್ (25) ಎಂದು ಗುರುತಿಸಲಾಗಿದೆ.

ಮನ್ವಿತ್ ಡಿಸೆಂಬರ್ 14ರಂದು ತನ್ನ ಸ್ನೇಹಿತರೊಂದಿಗೆ ಹೆಬ್ರಿಯ ಕೂಡ್ಲು ಫಾಲ್ಸ್ ಗೆ ಹೋಗಿದ್ದರು. ಅಲ್ಲಿ ಸ್ನೇಹಿತರು ಸ್ನಾನ ಮಾಡುತ್ತಿರುವಾಗ ಮನ್ವಿತ್ ಎತ್ತರದ ಬಂಡೆಯ ಮೇಲೆ ಕುಳಿತುಕೊಂಡಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ತಲೆ ತಿರುಗಿ ಕೆಳಗೆ ನೀರಿಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಡಿಸೆಂಬರ್ 17ರಂದು ಬೆಳಗ್ಗೆ ಮೃತಪಟ್ಟರೆಂದು ತಿಳಿದುಬಂದಿದೆ.

ಮನ್ವಿತ್ ರಿಗ ಮೂರ್ಛೆ ರೋಗವಿದ್ದು, ಈ ಬಗ್ಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

Share Information