Connect with us

    LATEST NEWS

    ತಮ್ಮದಲ್ಲದ ತಪ್ಪಿಗೆ ಉಡುಪಿ ಜನತೆ ಹೆಚ್ಚು ಟೋಲ್ ಕಟ್ಟಬೇಕಾಗಿದೆ – ರಘುಪತಿ ಭಟ್

    ಉಡುಪಿ ನವೆಂಬರ್ 26: ಸುರತ್ಕಲ್ ಟೋಲ್ ಗೇಟ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ರಘುಪತಿ ಭಟ್ ವಿರೋಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಸುರತ್ಕಲ್ ಟೋಲ್‌ನ್ನು ಮುಚ್ಚಿ, ಅಲ್ಲಿ ವಸೂಲಿ ಮಾಡುತಿದ್ದ ಶುಲ್ಕವನ್ನು ಹೆಜಮಾಡಿ ಟೋಲ್ ಶುಲ್ಕಕ್ಕೆ ಸೇರಿಸುವುದು ಸರಿಯಲ್ಲ. ಏಕೆಂದರೆ ಸುರತ್ಕಲ್ ಟೋಲ್‌ಗೇಟ್‌ಗೂ, ಹೆಜಮಾಡಿ ಟೋಲ್‌ಗೂ ಯಾವುದೇ ಸಂಬಂಧವಿಲ್ಲ. ಹೆಜಮಾಡಿಯ ಟೋಲ್‌ನ್ನು ನವಯುಗ ಕಂಪೆನಿ ಸಂಗ್ರಹಿಸುತ್ತಿದೆ ಎಂದರು.


    ಉಡುಪಿ ಜಿಲ್ಲೆಯಲ್ಲಿ ಈಗ ಮೂರು ಕಡೆಗಳಲ್ಲಿ ಟೋಲ್ ಸಂಗ್ರಹ ನಡೆಯುತ್ತಿದೆ. ಸುರತ್ಕಲ್ ಟೋಲ್‌ನ್ನು ಬಂಟ್ವಾಳಕ್ಕೆ ಸಂಬಂಧಿಸಿದ ಕಂಪೆನಿ ಪಡೆಯು‌ತ್ತಿದ್ದು, ನವಯುಗ ಅಲ್ಲಿ ಯಾವ ಕಾಮಗಾರಿಯನ್ನೂ ಮಾಡಿಲ್ಲ. ಈಗ ನವಯುಗ ಅಲ್ಲಿನ ಟೋಲ್‌ನ್ನು ಉಡುಪಿಯ ಜನತೆಯಿಂದ ಪಡೆಯುವುದು ಸರಿಯಲ್ಲ ಎಂದರು. ಇದರಿಂದ ತೊಂದರೆಗೊಳಗಾಗುವುದು ಉಡುಪಿಯ ಜನತೆ. ಅವರೀಗ ತಮ್ಮದಲ್ಲದ ತಪ್ಪಿಗೆ ಅಧಿಕ ಶುಲ್ಕ ಪಾವತಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಈ ನಿರ್ಧಾರವನ್ನು ವಿರೋಧಿಸಿ ತಾನು ಕೇಂದ್ರ ಸರಕಾರಕ್ಕೆ, ನಮ್ಮ ಸಂಸದರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಿರ್ಧಾರವನ್ನು ರದ್ದು ಪಡಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply