LATEST NEWS
ಕೊಚ್ಚಿಯಲ್ಲಿ ಹೆಲಿಕಾಪ್ಟರ್ ಅಪಘಢ – 7 ಮಂದಿ ಸುರಕ್ಷಿತ

ಕೇರಳ ಎಪ್ರಿಲ್ 11: ಕೊಚ್ಚಿಯ ಖಾಲಿ ಪ್ರದೇಶವೊಂದರಲ್ಲಿ ಹೆಲಿಕಾಪ್ಟರ್ ಒಂದು ಪತನವಾಗಿದ್ದು, ಹೆಲಿಕಾಪ್ಟರ್ ನಲ್ಲಿದ್ದ 7 ಮಂದಿ ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿದೆ.
ಅನಿವಾಸಿ ಭಾರತೀಯ ಲೂಲು ಗ್ರೂಪ್ ಅಧ್ಯಕ್ಷ ಯೂಸುಫ್ ಆಲಿ ಅವರ ಪತ್ನಿ ಮತ್ತು ಮೂವರು ಸಿಬ್ಬಂದಿ ಹಾಗೂ ಗಗನಸಖಿಯರಿಬ್ಬರು ಲೂಲು ಗ್ರೂಪ್‌ನ ಹೆಲಿಕಾಪ್ಟರ್‌ನಲ್ಲಿ ಪ್ರಯಣಿಸುತ್ತಿದ್ದರು.

ಇಂದು ಬೆಳಿಗ್ಗೆ ಪನಂಗಾಡ್ ಎಂಬಲ್ಲಿರುವ ಕೇರಳ ಮೀನುಗಾರಿಕೆ ಹಾಗೂ ಸಮುದ್ರ ಅಧ್ಯಯನ ವಿಶ್ವವಿದ್ಯಾಲಯದ ಆವರಣದಲ್ಲಿದ್ದ ಔಗು ಪ್ರದೇಶದಲ್ಲಿ ಹೆಲಿಕಾಪ್ಟರ್ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.