LATEST NEWS
ಹಡ್ಸನ್ ನದಿಗೆ ಬಿದ್ದ ಹೆಲಿಕಾಪ್ಟರ್ – ಮೂರು ಮಕ್ಕಳು ಸೇರಿದಂತೆ ಆರು ಮಂದಿ ಸಾವು

ನ್ಯೂಯಾರ್ಕ್ ಎಪ್ರಿಲ್ 11: ಹೆಲಿಕಾಪ್ಟರ್ ಒಂದು ಪತನಗೊಂಡು ಹಡ್ಸನ್ ನದಿಗೆ ಬಿದ್ದ ಪರಿಣಾಮ ಪೈಲಟ್ ಸೇರಿದಂತೆ ಆರು ಮಂದಿ ಸಾವಿಗೀಡಾದ ಘಟನೆ ನ್ಯೂಯಾರ್ಕ್‌ನಲ್ಲಿ ನಡೆದಿದೆ. ಮೃತರಲ್ಲಿ ನಾಲ್ವರು ಸ್ಪ್ಯಾನಿಷ್ ಮೂಲದ ಒಂದೇ ಕುಟುಂಬದವರಾಗಿದ್ದು, ಪ್ರವಾಸಕ್ಕಾಗಿ ನ್ಯೂಯಾರ್ಕ್‌ಗೆ ಬಂದಿದ್ದರು. ಮೃತಪಟ್ಟವರಲ್ಲಿ ಮೂವರು ಮಕ್ಕಳು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಮಧ್ಯಾಹ್ನ ಪಿಯರ್ 40ರಲ್ಲಿ ಸಂಭವಿಸಿದ ಘಟನೆಯಲ್ಲಿ ಬೆಲ್ 206L-4 ಲಾಂಗ್‌ರೇಂಜರ್ IV ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಲೋವರ್ ಮ್ಯಾನ್‌ಹ್ಯಾಟನ್‌ನಿಂದ ಹೊರಟ ಹೆಲಿಕಾಪ್ಟರ್, ಲಿಬರ್ಟಿ ಪ್ರತಿಮೆಯನ್ನು ಸುತ್ತು ಹಾಕಿದ ಬಳಿಕ, ಉತ್ತರಕ್ಕೆ ಹಡ್ಸನ್ ನದಿಯ ಮೇಲಿಂದ ಜಾರ್ಜ್ ವಾಷಿಂಗ್ಟನ್ ಬ್ರಿಡ್ಜ್ನತ್ತ ಹೊರಟಿತ್ತು. ಈ ಸಂದರ್ಭದಲ್ಲಿ ಏಕಾಏಕಿ ದಕ್ಷಿಣಕ್ಕೆ ತಿರುಗಿದ ಹೆಲಿಕಾಪ್ಟರ್ ನ್ಯೂಜೆರ್ಸಿ ಬಳಿ ನದಿಗೆ ಅಪ್ಪಳಿಸಿದೆ.

ಹೆಲಿಕಾಪ್ಟರ್ ಪತನದ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಬೆಲ್ 206 ಹೆಲಿಕಾಪ್ಟರ್‌ನ ಪತನಗೊಂಡ ಭಾಗಗಳು ಹಡ್ಸನ್ ನದಿಗೆ ಬೀಳುವುದನ್ನು ನೋಡಬಹುದಾಗಿದೆ. ಅಲ್ಲದೇ ಹೆಲಿಕಾಪ್ಟರ್‌ನ ರೋಟರ್ ಬ್ಲೇಡ್ ತುಂಡಾಗಿ ನದಿಗೆ ಮೊದಲು ಬಿದ್ದಿದೆ. ಬಳಿಕ ಪಕ್ಕದಲ್ಲಿ ಹೆಲಿಕಾಪ್ಟರ್ ನದಿಗೆ ಅಪ್ಪಳಿಸಿದೆ.
1 Comment