Connect with us

LATEST NEWS

ಅರಬ್ಬೀ ಸಮುದ್ರದಲ್ಲಿ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ…!

ಮುಂಬೈ, ಜೂನ್ 28: ಏಳು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ​​ ಅರಬ್ಬೀ ಸಮುದ್ರದ ಮೇಲೆ ತುರ್ತು ಲ್ಯಾಂಡಿಂಗ್​ ಮಾಡಲಾಗಿದೆ.

ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತೈಲ ಮತ್ತು ನೈಸರ್ಗಿಕ ಅನಿಲ ಲಿಮಿಟೆಡ್​​ (ಒಎನ್​ಜಿಸಿ) ಟ್ವೀಟ್​ ಮೂಲಕ ತಿಳಿಸಿದೆ. ಸದ್ಯಕ್ಕೆ ನಾಲ್ವರನ್ನು ರಕ್ಷಿಸಲಾಗಿದ್ದು, ಉಳಿದವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದೆ.

ಒಎನ್​ಜಿಸಿ ಸಂಸ್ಥೆಯ ಸಿಬ್ಬಂದಿ ಈ ಹೆಲಿಕಾಪ್ಟರ್​​ನಲ್ಲಿ ಪ್ರಯಾಣಿಸುತ್ತಿದ್ದರು, ಕಾರ್ಯ ನಿಮಿತ್ತ ತೆರಳಿದ್ದರು. ಈ ವೇಳೆ ಹೆಲಿಕಾಪ್ಟರ್​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ ತಕ್ಷಣವೇ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ ಎಂದು ಸಂಸ್ಥೆ ಹೇಳಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *