Connect with us

DAKSHINA KANNADA

ಇನ್ನು ಮುಂದೆ ಕಟೀಲು ಮೇಳದಿಂದ ಕಾಲಮಿತಿ ಯಕ್ಷಗಾನ: ಸಂಜೆ 5.30ರಿಂದ ರಾತ್ರಿ 10.30ವರೆಗೆ ಯಕ್ಷಗಾನ ಸೇವೆ

ಕಟೀಲು, ಆಗಸ್ಟ್ 23: ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ಕೈಗೊಂಡಿದೆ.

ರಾತ್ರಿ ಗಂಟೆ 10.30 ರಿಂದ 50 ಡೆಸಿಬಲ್‌ಗಿಂತ ಹೆಚ್ಚಿಗೆ ಧ್ವನಿವರ್ಧಕವನ್ನು ಬಳಸಬಾರದು ಎಂದು ಸರಕಾರದಿಂದ ಈಗಾಗಲೇ ದೇವಸ್ಥಾನಗಳಿಗೆ ಸೂಚನೆ ಬಂದಿದೆ. ಈ ನಿಟ್ಟಿನಲ್ಲಿ ಯಕ್ಷಗಾನ ಪ್ರದರ್ಶನದ ಸಮಯವನ್ನು ಬದಲಾಯಿಸುವುದು ಅನಿವಾರ‍್ಯವಾಗಿತ್ತು. ಪ್ರತೀ ವರ್ಷ ಮೇಳಗಳು ಆರು ತಿಂಗಳು ತಿರುಗಾಟ ನಡೆಸುತ್ತದೆ, ವರ್ಷಕ್ಕೆ ಸುಮಾರು 1,000 ಅಧಿಕ ಪ್ರದರ್ಶನ ನೀಡುತ್ತಿದ್ದು, ರಾತ್ರಿ 8.30ಕ್ಕೆ ಪೂರ್ವರಂಗ ಆರಂಭವಾದರೆ ರಾತ್ರಿ 10.30ಕ್ಕೆ ಪ್ರಸಂಗ ಪೀಠಿಕೆ ಆರಂಭವಾಗುತ್ತದೆ ಬೆಳಗ್ಗಿನ ಜಾವ ಸುಮಾರು 5.30ಕ್ಕೆ ಯಕ್ಷಗಾನ ಮುಗಿಯುತ್ತಿತ್ತು.

ಮುಂದಿನ ದಿನಗಳಲ್ಲಿ ಸಂಜೆ 5.30ರಿಂದ ರಾತ್ರಿ 10.30ವರೆಗೆ ಯಕ್ಷಗಾನ ಸೇವೆ ನಡೆಯಲಿದೆ ಎಂದು ಕಟೀಲು ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನುವಂಶಿಕ ಮೊಕ್ತೇಸರ ಕೊಡೆತ್ತೂರು ಗುತ್ತು ಸನತ್ ಕುಮಾರ ಶೆಟ್ಟಿ, ಆನುವಂಶಿಕ ಮೊಕ್ತೇಸರ ಮತ್ತು ಅರ್ಚಕರಾದ ವಾಸುದೇವ ಆಸ್ರಣ್ಣ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು,

ದೇವರ ಎದುರು ಕಾಲಮಿತಿ ಯಕ್ಷಗಾನ ಬಗ್ಗೆ ಹೂಪ್ರಶ್ನೆ ಇಟ್ಟಾಗ ದೇವರ ಒಪ್ಪಿಗೆ ಬಂದಿದೆ. ಹಾಗಾಗಿ ಕಾಲಮಿತಿ ಯಕ್ಷಗಾನ ಮಾಡುವ ಬಗ್ಗೆ ಮಂಗಳವಾರ ಆಡಳಿತ ಮಂಡಳಿ ನಿರ್ಧಾರ ಮಾಡಿದ್ದು, ಸಂಜೆ 5 ಗಂಟೆಯಿಂದ ರಾತ್ರಿ 10.30ರ ತನಕ ಯಕ್ಷಗಾನ ನಡೆಸುವ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿದೆ. ಇನ್ನು ಯಕ್ಷಗಾನ ಪ್ರದರ್ಶನದ ಸ್ವರೂಪ ಚಿಂತನೆಗಳ ಸ್ಪಷ್ಟ ರೂಪ ಮುಂದಿನ ದಿನಗಳಲ್ಲಿ ನಡೆಯುವ ಸಭೆಗಳಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

Share Information
Advertisement
Click to comment

You must be logged in to post a comment Login

Leave a Reply