LATEST NEWS
ಮಂಗಳೂರು ಖಾಸಗಿ ಮೆಡಿಕಲ್ ಕಾಲೇಜಿನ ಲೆಡೀಸ್ ಟಾಯ್ಲೆಟ್ ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ – ದೂರು ದಾಖಲು
ಮಂಗಳೂರು ಮೇ 07: ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ ನಲ್ಲಿ ಮೊಬೈಲ್ ಪೋನ್ ಇಟ್ಟು ಚಿತ್ರೀಕರಣಕ್ಕೆ ಪ್ರಯತ್ನಿಸಿದ ಘಟನೆ ನಡೆದಿದ್ದು, ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಿಚಿತನ ವಿರುದ್ದ ದೂರು ದಾಖಲಾಗಿದೆ.
ಮಂಗಳೂರಿನ ಲೈಟ್ ಹೌಸ್ ಹಿಲ್ ರೋಡ್ ಬಾವುಟಗುಡ್ಡೆಯಲ್ಲಿರುವ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ 1ನೇ ಮಹಡಿಯಲ್ಲಿರುವ ಲೇಡಿಸ್ ಟಾಯ್ಲೆಟ್ ನ ಎಕ್ಸಾಸ್ಟ್ ಫ್ಯಾನ್ ಬಳಿ ಮೊಬೈಲ್ ಪೋನ್ ಇಟ್ಟು ವಿಡಿಯೋ ರೆಕಾರ್ಡ್ ಮಾಡಲು ಪ್ರಯತ್ನಿಸಿದ ಘಟನೆ ನಡೆದಿದೆ.
ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದ್ದು, ದೂರಿನ ಪ್ರಕಾರ ದಿನಾಂಕ 06.05.2024 ರಂದು ಸಂಜೆ 3.30 ಗಂಟೆಗೆ ಕಸ್ತೂರ್ಬಾ ಕಾಲೇಜಿನ 1 ನೇ ಮಹಡಿಯಲ್ಲಿರುವ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ರಿಂಗ್ ಆಗಿದೆ. ಈ ವೇಳೆ ಭದ್ರತಾ ಸಿಬ್ಬಂದಿ ಹೋಗಿ ಪರಿಶೀಲನೆ ನಡೆಸಿದಾಗ ಟಾಯ್ಲೆಟ್ ನಲ್ಲಿ ಯಾರೂ ಇರಲ್ಲಿಲ್ಲವ. ಅಲ್ಲದೆ ಮೊಬೈಲ್ ನ್ನು ಎಕ್ಸಾಸ್ಟ್ ಫ್ಯಾನ್ ಬಳಿ ಇಡಲಾಗಿದ್ದು ಕಂಡು ಬಂದಿದೆ. ಟಾಯ್ಲೆಟ್ ಗೆ ಬರುವ ಮಹಿಳೆಯರ ದೃಶ್ಯ ಸೆರೆ ಮಾಡಲು ಇರಿಸದ ಸ್ಥಿತಿಯಲ್ಲಿ ಮೊಬೈಲ್ ಕಂಡು ಬಂದಿದೆ.
ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 17 ವರ್ಷದ ಅಪ್ರಾಪ್ತ ಯುವಕನನ್ನು ಬಂಧಿಸಿದ್ದಾರೆ. ಮೇ 06ರಂದು ಮೆಡಿಕಲ್ ಕಾಲೇಜಿಗೆ ರೋಗಿಯಂತೆ ಬಂದಿದ್ದ ಅಪ್ರಾಪ್ತ ಯುವಕ ಲೇಡಿಸ್ ಟಾಯ್ಲೆಟ್ಗೆ ಹೋಗಿ ಮೊಬೈಲ್ ಇಟ್ಟಿದ್ದ. ತದನಂತರ ಲೇಡಿಸ್ ಟಾಯ್ಲೆಟ್ ಒಳಗಿನಿಂದ ಮೊಬೈಲ್ ರಿಂಗ್ ಆದ ಸದ್ದು ಕೇಳಿಸಿದ್ದು ಪರಿಶೀಲನೆ ಮಾಡಿದಾಗ ಮೊಬೈಲ್ ಪತ್ತೆಯಾಗಿದೆ. ಮೊಬೈಲ್ ಸಿಕ್ಕ ಬಳಿಕ ಕಾಲೇಜು ಸಿಬ್ಬಂದಿ ಬಂದರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಕಾಲೇಜಿನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹದಿನೇಳು ವರ್ಷದ ಅಪ್ರಾಪ್ತ ಯುವಕನನ್ನು ಬಂಧಿಸಿ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.