Connect with us

    LATEST NEWS

    ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಪಕ್ಕದಲ್ಲೇ ಹೋದ ರೈಲು

    ಹೈದರಾಬಾದ್ ಸೆಪ್ಟೆಂಬರ್ 06: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮೀಕ್ಷೆ ವೇಳೆ ರೈಲ್ವೆ ಟ್ರ್ಯಾಕ್ ಮೇಲೆ ನಿಂತಿದ್ದ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಸಮೀಪದಲ್ಲೇ ರೈಲೊಂದು ಸಾಗಿದೆ.
    ವಿಜಯವಾಡದ ಮಧುರಾನಗರದ ಪ್ರವಾಹ ಪೀಡಿತ ಪ್ರದೇಶವನ್ನು ಪರಿಶೀಲಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.


    ವಿಜಯವಾಡದಲ್ಲಿ ಸುರಿದ ಭಾರೀ ಮಳೆಗೆ ಬುಡಮೇರು ನದಿ ಉಕ್ಕಿ ಹರಿದಿದ್ದು ಭಾರಿ ಪ್ರವಾಹಕ್ಕೆ ಕಾರಣವಾಗಿದೆ. ಪ್ರವಾಹ ಪರಿಸ್ಥಿತಿ ಪರಿಶೀಲನೆ ನಡೆಸಲು ಸಿಎಂ ಚಂದ್ರಬಾಬು ನಾಯ್ಡು ರೈಲ್ವೆ ಸ್ಟೀಲ್ ಬ್ರಿಡ್ಜ್ ಮೇಲೆ ತಮ್ಮ ಭದ್ರತಾ ಸಿಬ್ಬಂದಿಯೊಂದಿಗೆ. ನಿಂತಿದ್ದರು. ಈ ವೇಳೆ ರೈಲೊಂದು ವೇಗದಲ್ಲಿ ಸಾಗಿದೆ. ಈ ವೇಳೆ ಯಾವುದೇ ಅನಾಹುತ ಸಂಭವಿಸಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
    ಮುಖ್ಯಮಂತ್ರಿಗಳ ಸಮೀಪದಲ್ಲಿ ಹಾದು ಹೋಗುವ ರೈಲಿನ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply