Connect with us

    LATEST NEWS

    ರಾಜ್ಯದಲ್ಲಿ ಕರೋನಾ ಭೀತಿ ಮಂಗಳೂರಿನಲ್ಲಿ ಹೈ ಅಲರ್ಟ್

    ರಾಜ್ಯದಲ್ಲಿ ಕರೋನಾ ಭೀತಿ ಮಂಗಳೂರಿನಲ್ಲಿ ಹೈ ಅಲರ್ಟ್

    ಮಂಗಳೂರು: ಕರೋನಾ ಶಂಕಿತ ಟೆಕ್ಕಿಯೊಬ್ಬ ತೆಲಂಗಾಣದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ಆಗಮಿಸಿದ್ದ ಹಿನ್ನಲೆ ರಾಜ್ಯಾದ್ಯಂತ ಪ್ರೇಕ್ಷಣೀಯ ಸ್ಥಳಗಳು ಸೇರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಮಂಗಳೂರಿನಲ್ಲೂ ಕೂಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

    ಕರಾವಳಿಯಲ್ಲಿ ವೈರಸ್ ಬರದಂತೆ ತಡೆಗಟ್ಟಲು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಯಂತ್ರಗಳನ್ನು ಅಳವಡಿಸಲಾಗಿದೆ. ದುಬೈ ಸೇರಿದಂತೆ ಎಲ್ಲಾ ದೇಶಗಳಿಂದ ಬರುವ ವಿಮಾನದಲ್ಲಿ ಹೆಚ್ಚುವರಿ ತಪಾಸಣೆ ಮಾಡಲಾಗುತ್ತಿದ್ದು, ಹಡಗಿನ ಮೂಲಕ ಬರುವವರಿಗೂ ಸೂಕ್ತ ತಪಾಸಣೆ ನಡೆಸಲಾಗುತ್ತಿದೆ.

    ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸೋಲೇಟರ್ ವಾರ್ಡ್ ನಿರ್ಮಾಣ ಮಾಡಲಾಗಿದೆ. ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಕರೋನಾ ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳ ಗಡಿಯಲ್ಲಿ ಎಚ್ಚರಿಕೆ ನೀಡಲಾಗಿದೆ

    Share Information
    Advertisement
    Click to comment

    You must be logged in to post a comment Login

    Leave a Reply