LATEST NEWS
ಹಿಜಬ್-ಕೇಸರಿ ವಿವಾದ ನಾಳೆಯಿಂದ ಮೂರು ದಿನ ರಾಜ್ಯದ ಎಲ್ಲಾ ಹೈಸ್ಕೂಲ್ ಮತ್ತು ಕಾಲೇಜುಗಳಿಗೆ ರಜೆ

ಬೆಂಗಳೂರು ಫೆಬ್ರವರಿ 08: ಹಿಜಾಬ್-ಕೇಸರಿ ವಿವಾದ ತಾರಕಕ್ಕೇರಿದ ಹಿನ್ನೆಲೆ ರಾಜ್ಯದ ಎಲ್ಲಾ ಹೈಸ್ಕೂಲ್ ಮತ್ತು ಕಾಲೇಜುಗಳಿಗೆ ನಾಳೆಯಿಂದ 3 ದಿನ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಪ್ರಾಥಮಿಕ ಶಾಲೆಗಳಿಗೆ ರಜೆ ಇಲ್ಲ. ಎಂದಿನಂತೆ ತರಗತಿ ನಡೆಯಲಿದೆ.
ಈಗಾಗಲೇ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಅಲ್ಲದೆ ಈ ವಿಚಾರಕ್ಕೆ ಇಡೀ ರಾಜ್ಯದಲ್ಲಿ ಪ್ರತಿಭಟನೆ ಹಾಗೂ ಗಲಾಟೆಗಳು ನಡೆಯುವ ಸಾಧ್ಯತೆ ಇರುವ ಹಿನ್ನಲೆ ಎಚ್ಚೆತ್ತುಕೊಂಡ ರಾಜ್ಯ ಸರಕಾರ ರಾಜ್ಯದ ಎಲ್ಲಾ ಶಾಲೆ-ಕಾಲೇಜು, ಎಂಜನಿಯರಿಂಗ್, ಪದವಿ ಕಾಲೇಜಗಳಿಗೆ ನಾಳೆಯಿಂದ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಸಿಎಂ ಮನವಿ ಮಾಡಿದ್ದು, ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.