LATEST NEWS
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮೂವರ ಬಂಧನ

ಮಂಗಳೂರು ಸೆಪ್ಟೆಂಬರ್ 9: ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆಯರು ಸೇರಿದಂತೆ ಮೂರು ಮಂದಿಯನ್ನು ಬಂಧಿಸಿದ ಘಟನೆ ಮಂಗಳೂರಿನ ನಡೆದಿದೆ. ನಗರದ ಕದ್ರಿ ಕೈ ಬಟ್ಟಲ್ ಎಂಬಲ್ಲಿ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಮೂರು ಮಂದಿ ಯುವತಿಯರನ್ನು ರಕ್ಷಿಸಿದ್ದಾರೆ.
ಹೈಟೆಕ್ ವೇಶ್ಯಾವಾಟಿಕೆ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಎಸಿಪಿ ಉದಯ ನಾಯಕ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಬಂಧಿತ ಇಬ್ಬರು ಮಹಿಳೆಯರು ಹಾಗೂ ಸ್ಥಳೀಯ ಯುವಕನೊಬ್ಬ ನನ್ನು ಕೂಡ ಬಂಧಿಸಲಾಗಿದೆ. ರಕ್ಷಿಸಲ್ಪಟ್ಟ 3 ಯುವತಿಯರು ಬೆಂಗಳೂರಿನವರು ಎಂದು ಹೇಳಲಾಗಿದೆ.

ಮೊಬೈಲ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಗುಪ್ತವಾಗಿ ಕಾರ್ಯಾಚರಿಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆಯನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ದಾಳಿ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದ್ದು ತನಿಖೆ ಮುಂದುವರೆದಿದೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.