ಬೆಂಗಳೂರು ನವೆಂಬರ್ 17: ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ಆದೇಶವನ್ನು ಹೈಕೋರ್ಟ್ ರದ್ದು ಪಡಿಸಿದೆ. ಅಲ್ಲದೇ ಸೂಕ್ತ ಕಾರಣ, ಸೆಕ್ಷನ್ಗಳೊಂದಿಗೆ ಹೊಸದಾಗಿ ವಿಚಾರಣೆ ನಡೆಸಿ 15 ದಿನಗಳಲ್ಲಿ ಆದೇಶ ನೀಡಲು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚನೆ ನೀಡಿದೆ.

ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Thimarody) ಒಂದು ವರ್ಷ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸಪ್ಟೆಂಬರ್ 20ರಂದೇ ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು.
ಗಡಿಪಾರು ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾ ಸೂರಜ್ ಗೋವಿಂದರಾಜು ಪೀಠದಲ್ಲಿ ನಡೆಯಿತು. ವಿಚಾರಣೆ ವೇಳೆ ಗಡಿಪಾರು ಅಗತ್ಯ ಇದ್ದರೆ ಮತ್ತೊಮ್ಮೆ ಹೊಸದಾಗಿ ಕಾನೂನಿನ ಪ್ರಕಾರವಾಗಿ 15 ದಿನದ ಒಳಗಡೆ ಆದೇಶ ಮಾಡಲು ಪುತ್ತೂರು ಎಸಿಗೆ ಹೈಕೋರ್ಟ್ ಅವಕಾಶ ನೀಡಿದೆ.



