ಬೆಂಗಳೂರು ನವೆಂಬರ್ 12: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ನಡೆಸುತ್ತಿರುವ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಇದರಿಂದ ಇದೀಗ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಹಾಗೂ ವಿಠ್ಠಲಗೌಡ ಎಸ್ಐಟಿ ತನಿಖೆಯನ್ನ ಮತ್ತೆ ಎದುರಿಸಬೇಕಿದೆ.

ಪ್ರಕರಣ ಸಂಬಂಧ ಎಸ್ಐಟಿ ಪರ ವಾದಿಸಿದ್ದ ವಿಶೇಷ ಅಭಿಯೋಜಕ ಬಿ.ಎನ್.ಜಗದೀಶ್, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದ ನಂತರವೇ ತನಿಖೆ ನಡೆಸಲಾಗುತ್ತಿದೆ. ಎಸ್ಐಟಿ ತನಿಖೆಯನ್ನು ಅರ್ಜಿದಾರರೇ ಹೊಗಳಿದ್ದಾರೆಂದು ನ್ಯಾಯಾಲಕ್ಕೆ ತಿಳಿಸಿದ್ದರು. ಈ ಹಿನ್ನಲೆ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ, ಆರೋಪಿಗಳಿಗೆ ಕಿರುಕುಳ ನೀಡದಂತೆ ಮಧ್ಯಂತರ ಆದೇಶ ವಿಸ್ತರಣೆ ಮಾಡಿ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ಹೈಕೋರ್ಟ್ ಪೀಠದಿಂದ ಆದೇಶ ಮಾಡಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದ ಎಫ್ಐಆರ್ (FIR No. 39/2025), ವಿಚಾರಣೆಗೆ ಹಾಜರಾಗಲು ಪೊಲೀಸರು ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಸೇರಿ ನಾಲ್ವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲ ಬಾಲನ್, ಈಗಾಲೇ 9 ಬಾರಿ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ. ಎಫ್ಐಆರ್ನಲ್ಲಿ ನಮ್ಮನ್ನು ಆರೋಪಿಗಳೆಂದು ಉಲ್ಲೇಖಿಸಿಲ್ಲ. ಖುದ್ದಾಗಿ ನೋಟಿಸ್ ಜಾರಿ ಮಾಡದೇ ವಾಟ್ಸ್ಯಾಪ್, ಇಮೇಲ್ಗಳಲ್ಲಿ ನೀಡಿದ್ದಾರೆ. BNSS ಸೆಕ್ಷನ್ 35(3) ಅಡಿಯಲ್ಲಿ ಸಮನ್ಸ್ ನೀಡಿದ್ದು, ಎಸ್ಐಟಿ ಸಮನ್ಸ್ ನೀಡಿರುವುದು ಕಾನೂನು ಬಾಹಿರ. ನಾವು ಆರೋಪಿಗಳೂ ಅಲ್ಲ, ಸಾಕ್ಷಿಯೂ ಅಲ್ಲವೆಂದು ವಾದ ಮಂಡಿಸಿದ್ದರು. ರಾಜಕೀಯ , ಧಾರ್ಮಿಕ ಮತ್ತು ಸಂಘಟನಾತ್ಮಕ ವೈರತ್ವದಿಂದ ನೋಟಿಸ್ ನೀಡಲಾಗಿದೆ. ವಿಚಾರಣೆ ಹೆಸರಲ್ಲಿ ಬೆಳಗ್ಗೆಯಿಂದ ಮಧ್ಯರಾತ್ರಿವರೆಗೆ ಕೂರಿಸಲಾಗುತ್ತೆ. ಈಗಾಗಲೇ 150 ಗಂಟೆಗೂ ಹೆಚ್ಚು ಕಾಲ ಅಜರ್ಜದಾರರ ವಿಚಾರಣೆ ನಡೆಸಲಾಗಿದೆ. ಆರಂಭದಲ್ಲಿ 211(a) ಅಡಿ ಎಫ್ಐಆರ್ ದಾಖಲಿಸಿ ನಂತರ ಬೇರೆ ಸೆಕ್ಷನ್ ಸೇರಿಸಿದ್ದಾರೆ ಎಂದುವಾದಿಸಿದ್ದರು.
ಸಕಾರದ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಎಫ್ಐಆರ್ಗೆ ತಡೆ ನೀಡಿ ಅಕ್ಟೋಬರ್ 30ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿತಲ್ಲದೆ, ಅರ್ಜಿಯನ್ನು ಮೆರಿಟ್ ಆಧಾರದಲ್ಲಿ ವಿಚಾರಣೆ ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿತು.
Read This – ಮಂಗಳೂರು ಭಾರತದ ಮೊದಲ ಸ್ಟಾರ್ಟ್ಅಪ್ ಡಿಸ್ಟ್ರಿಕ್ಟ್ ಮತ್ತು ಸಿಲಿಕಾನ್ ಬೀಚ್ ಆಗಿ ಹೊರಹೊಮ್ಮಲಿದೆ
ಇದಕ್ಕೂ ಮುನ್ನ ರಾಜ್ಯ ಹೆಚ್ಚುವರಿ ಸರಕಾರಿ ಅಭಿಯೋಜಕ ಬಿ.ಎನ್.ಜಗದೀಶ್ ವಾದ ಮಂಡಿಸಿ, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದಿಲ್ಲ ಎಂದು ಕೋರ್ಟ್ ಗೆ ಸುಳ್ಳು ಮಾಹಿತಿ ನೀಡಿ ಅರ್ಜಿದಾರರು ತಡೆಯಾಜ್ಞೆ ಪಡೆದುಕೊಂಡಿದ್ದಾರೆ. ಆದರೆ, ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಿಸಲು ಹಾಗೂ ನೋಟಿಸ್ ನೀಡಲು ಮ್ಯಾಜಿಸ್ಟ್ರೇಟ್ ಅನುಮತಿ ಪಡೆಯಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರಲ್ಲದೆ, ಅನುಮತಿಯ ಪ್ರತಿಯನ್ನು ಕೋರ್ಟ್ಗೆ ಸಲ್ಲಿಸಿದರು.
Readthis – ತಿಥಿ ಸಿನೆಮಾ ಖ್ಯಾತಿಯ ಗಡ್ಡಪ್ಪ ನಿಧನ
ಈ ಹಿಂದೆ ನೀಡಿದ್ದ ನೋಟಿಸ್ ಗಳಿಗೂ, ಈಗ ನೀಡಿರುವ ನೋಟಿಸ್ ಗಳಿಗೂ ಸಂಬಂಧವಿಲ್ಲ. ಈ ಹಿಂದೆ ಅರ್ಜಿದಾರರನ್ನು ಸಾಕ್ಷಿಗಳಾಗಿ ವಿವರಣೆ ಕೇಳಲು ನೋಟಿಸ್ ನೀಡಲಾಗಿತ್ತು. ಈಗ ಅವರನ್ನು ಆರೋಪಿಗಳನ್ನಾಗಿಸಲಾಗಿದ್ದು, ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. ಇದರಲ್ಲಿ ಕಿರುಕುಳದ ಪ್ರಶ್ನೆಯೇ ಇಲ್ಲ. ಎಫ್ಐಆರ್ ಗೆ ತಡೆಯಾಜ್ಞೆ ನೀಡಿರುವುದರಿಂದ ತನಿಖೆಗೆ ಅಡ್ಡಿಯಾಗುತ್ತಿದೆ. ಆದ್ದರಿಂದ, ಈ ಹಿಂದೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಕೋರಿದರು.