ಗ್ವಾಲಿಯರ್ ಮಾರ್ಚ್ 02: ಡಬ್ರಾ–ಗ್ವಾಲಿಯರ್ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತ ಎಲ್ಲರನ್ನೂ ಬೆಚ್ಚಿಬಿಳಿಸುವಂತಿದೆ. ಟ್ರಕ್ ಡ್ರೈವರ್ ಒಬ್ಬ ಕಾರನ್ನು ಸುಮಾರು 1.5 ಕಿಲೋ ಮೀಟರ್ ದೂರ ಎಳೆದುಕೊಂಡು ಹೋಗಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.

ಶನಿವಾರ ಸಂಜೆ ಗ್ವಾಲಿಯರ್ನ ದಾಬ್ರಾ-ಗ್ವಾಲಿಯರ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಟೆಕನ್ಪುರ ಗಡಿಯ ಹೊರಭಾಗದಲ್ಲಿರುವ ಬಜೇರಾ ಗ್ರಾಮದ ಕಲ್ವರ್ಟ್ ಬಳಿ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ನೆಕ್ಸನ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ನಂತರ, ಕಾರು ಟ್ರಕ್ನ ಮುಂಭಾಗದಲ್ಲಿ ಸಿಲುಕಿಕೊಂಡಿತು ಮತ್ತು ಚಾಲಕ ನಿಲ್ಲಿಸುವ ಬದಲು ಅದನ್ನು ಎಳೆದುಕೊಂಡ ಹೋಗಿದ್ದಾನೆ. ಟ್ರಕ್ ಚಾಲಕ ವಾಹನವನ್ನು ನಿಲ್ಲಿಸದೆ ಸುಮಾರು 1.5 ಕಿಲೋಮೀಟರ್ಗಳವರೆಗೆ ಕಾರನ್ನು ಎಳೆದುಕೊಂಡು ಹೋಗಿದ್ದಾನೆ.
ಅದೃಷ್ಟವಶಾತ್, ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ. ಕಾರಿನಲ್ಲಿ ವಿಶೇಷ ಸಶಸ್ತ್ರ ಪಡೆ (SAF) ಅಧಿಕಾರಿಯೂ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಈ ಸಂಪೂರ್ಣ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.