Connect with us

LATEST NEWS

ಹಿಜಬ್ ಹಾಕದೇ ಬರಲು ಸಿದ್ಧವಿಲ್ಲ ಎಂದಾದರೆ ಕಾಲೇಜು ಆವರಣದೊಳಗೂ ಬರಬೇಡಿ – ರಘುಪತಿ ಭಟ್

ಉಡುಪಿ ಜನವರಿ 31: ಉಡುಪಿ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಕಾಲೇಜಿನ ಆಡಳಿತ ಮಂಡಳಿ ಕೊನೆಗೂ ಕಠಿಣ ಕ್ರಮ ತೆಗೆದುಕೊಂಡಿದ್ದು, ಯಾವುದೇ ಕಾರಣಕ್ಕೂ ಹಿಜಬ್ ಧರಿಸಿ ಪಾಠ ಕೇಳಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದೆ.


ಕಾಲೇಜಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಸೋಮವಾರ ಕಾಲೇಜು ಆಡಳಿತ ಮಂಡಳಿ, ಅಭಿವೃದ್ಧಿ ಸಮಿತಿ, ಪೋಷಕರು, ಉಪನ್ಯಾಸಕರ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಘುಪತಿ ಭಟ್ ಪ್ರತಿಭಟನೆಯಲ್ಲಿರುವ ವಿಧ್ಯಾರ್ಥಿನಿಯರು ಕಾಲೇಜಿನ ತರಗತಿಗೆ ಹಿಜಾಬ್ ತೆಗೆದು ಹಾಜರಾಗುತ್ತೇನೆ ಎನ್ನುವ ನಿರ್ಧಾರ ತೆಗೆದುಕೊಂಡರಷ್ಟೇ ಕಾಲೇಜಿಗೆ ಬನ್ನಿ. ಹಿಜಾಬ್ ಹಾಕದೇ ಬರಲು ಸಿದ್ಧವಿಲ್ಲ ಎಂದಾದರೆ ಕಾಲೇಜು ಆವರಣದೊಳಗೂ ಬರಬೇಡಿ ಎಂದರು.


ಕಾಲೇಜು ಆವರಣದೊಳಗೆ ನಿಮ್ಮ ನಿರ್ಧಾರ ಮಾಡುವಂತಿಲ್ಲ. ನಮ್ಮ ನಿರ್ಧಾರ ಆಗಿದೆ. ಇಲ್ಲಿಗೆ ಬಂದು ಕಾಲೇಜಿನ ಶೈಕ್ಷಣಿಕ ವಾತಾವರಣ ಹಾಳು ಮಾಡಬಾರದೆಂದು ಹೇಳಿದ್ದೇವೆ. ಪೊಲೀಸ್ ಇಲಾಖೆಗೂ ತಿಳಿಸಿದ್ದೇವೆ. ಬೇರೆ ಬೇರೆ ಸಂಘ-ಸಂಸ್ಥೆಗಳು, ಮಾಧ್ಯಮದವರು, ಯಾರನ್ನು ನಾಳೆಯಿಂದ ಅವಕಾಶ ಬೇಡ. ಇನ್ನೆರಡು ತಿಂಗಳಲ್ಲಿ ಪರೀಕ್ಷೆ ಬರುತ್ತದೆ. ಉಳಿದ ಮಕ್ಕಳ ಪೋಷಕರು ದೂರುತ್ತಿದ್ದಾರೆ. ಈ ಸಮಸ್ಯೆಗಳನ್ನು ಪರಿಹರಿಸಿ. ಉಳಿದ ಮಕ್ಕಳಿಗೆ ಓದುವುದಕ್ಕೆ ಸಮಸ್ಯೆಯಗುತ್ತಿದೆ ಎಂದು ಶಾಸಕರು ಹೇಳಿದರು.

Advertisement
Click to comment

You must be logged in to post a comment Login

Leave a Reply