Connect with us

LATEST NEWS

ಹಿಜಬ್ ಇಲ್ಲದೆ ತರಗತಿಯಲ್ಲಿ ಪಾಠ ಕೇಳುವುದಿಲ್ಲ.. ನಮಗೆ ಕುರಾನ್ ಹೇಳಿದ್ದೆ ಫೈನಲ್…!!

ಉಡುಪಿ ಮಾರ್ಚ್ 15: ಹಿಜಬ್ ಇಲ್ಲದೆ ನಾವು ತರಗತಿಯಲ್ಲಿ ಪಾಠ ಕೇಳುವುದಿಲ್ಲ, ನಮಗೆ ಕುರಾನ್ ಹೇಳಿದ್ದೆ ಫೈನಲ್ , ನಮ್ಮ ಹಕ್ಕನ್ನು ಪಡೆಯುವರೆಗೂ ನಮ್ಮ ಹೋರಾಟ ನಿಲ್ಲೋದಿಲ್ಲ ಎಂದು ಹಿಜಬ್ ವಿವಾದದ ಮೂಲ ವಿಧ್ಯಾರ್ಥಿನಿಯರು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.


ಹಿಜಾಬ್ ಪರ ಹೋರಾಟಗಾರ್ತಿ ಆಲಿಯಾ ಅಸಾದಿ ಮಾತನಾಡಿ, ನಮಗೆ ಕೋರ್ಟ್​ನಲ್ಲಿ ನ್ಯಾಯ ಸಿಗುವ ಭರವಸೆ ಇತ್ತು. ಆದರೆ ನಮ್ಮ ವಿರುದ್ಧ ತೀರ್ಪು ಬಂದಿದೆ. ಆದರೆ ನಾವು ಯಾವುದೇ ಕಾರಣಕ್ಕೂ ಹಿಜಾಬ್​ ಇಲ್ಲದೆ ಕಾಲೇಜಿಗೆ ಬರಲ್ಲ. ಹೆಣ್ಣುಮುಕ್ಕಳು ಮನೆಯಿಂದ ಹೊರಬರುವಾಗ ತಲೆ-ಎದೆಭಾಗವನ್ನು ಮುಚ್ಚಬೇಕು ಎಂದು ಕುರಾನ್​ನಲ್ಲಿ ಬರೆದಿದೆ. ಕುರಾನ್​ ಹೇಳಿದ ಮೇಲೆ ನಮಗೆ ಅದೇ ಫೈನಲ್, ಅದೇ ನಮ್ಮ ಸಂವಿಧಾನ. ನಮ್ಮ ಹಕ್ಕು ಪಡೆಯೋವರೆಗೂ ನಮ್ಮ ಹೋರಾಟ ನಿಲ್ಲೋದಿಲ್ಲ. ನಮಗೆ ಹಿಜಾಬ್​ ಅತ್ಯವಶ್ಯಕ. ಅದಕ್ಕಾಗಿಯೇ ಈ ಹೋರಾಟ. ರಾಜಕೀಯ ಉದ್ದೇಶಕ್ಕಾಗಿ ಇದನ್ನು ದೊಡ್ಡದು ಮಾಡಲಾಯಿತು. ಕಾಲೇಜಿನ ಕಾಂಪೌಂಡಿನ ಒಳಗೇ ಈ ಸಮಸ್ಯೆಯನ್ನ ಬಗೆಹರಿಸಬಹುದಿತ್ತು ಎಂದರು.

ಹಿಜಾಬ್ ವಿಚಾರವನ್ನು ರಾಜಕೀಯ ಲಾಭಕ್ಕೆ ಕಮ್ಯೂನಲ್ ಮಾಡಲಾಗಿದೆ. ರಾಜಕೀಯ ದುರುದ್ದೇಶದಿಂದ ದೊಡ್ಡ ವಿಷಯವಾಗಿ ಮಾಡಿದರು. ಎಲ್ಲರ ಶಿಕ್ಷಣಕ್ಕೆ ಬಹಳ ಸಮಸ್ಯೆ ಆಗಿದೆ. ನಮಗೆ ಧರ್ಮ ಮತ್ತು ಶಿಕ್ಷಣ ಬಹಳ ಮುಖ್ಯ. ನಮಗೆ ಎರಡೂ ಅವಕಾಶ ಬೇಕು ಎಂದಿದ್ದಾರೆ. ಇನ್ನು ನಾವು ಕಾಂಪ್ರಮೈಸ್ ಮಾಡಲ್ಲ. ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ. ನಾವು ಕೋರ್ಟ್‌ಗೆ ಹಿಜಾಬ್ ಗಾಗಿ ಹೋದೆವು. ನಮ್ಮ ನಿರೀಕ್ಷೆ ವಿರುದ್ಧ ತೀರ್ಪು ಬಂದಿದ್ದು, ಸರಕಾರದ ವಸ್ತ್ರಸಂಹಿತೆ ಆದೇಶವನ್ನು ತೀರ್ಪಲ್ಲೇ ಪ್ರಕಟಿಸಲಾಗಿದೆ ಎಂದು ಹೇಳಿದ್ದಾರೆ. ಮತ್ತೋರ್ವ ಹೋರಾಟಗಾರ್ತಿ ಅಲ್ಮಾಸ್ ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್ ಸಂವಿಧಾನ ರಚನೆ ಮಾಡಿದ್ದಾರೆ. ಅಂಬೇಡ್ಕರ್ ಬದುಕಿದ್ದರೆ ಇಂದು ಕಣ್ಣೀರು ಹಾಕುತ್ತಿದ್ದರು. ಸಂವಿಧಾನದ ಈಗಿನ ಪರಿಸ್ಥಿತಿ ನೋಡಿ ಮರುಗುತಿದ್ದರು ಎಂದಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *