LATEST NEWS
ಹಿಜಾಬ್ ಗೆ ಆಗ್ರಹ ಮಾಡುವವರು ಆನ್ಲೈನ್ ಮೂಲಕ ತರಗತಿ ತೆಗೆದುಕೊಳ್ಳಲಿ – ರಘುಪತಿ ಭಟ್

ಉಡುಪಿ : ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿನಿಯರು ಹಿಜಾಬ್ ಹಠಕ್ಕೆ ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದು, ತರಗತಿಗೆ ಸಮವಸ್ತ್ರ ಧರಿಸಿ ಬರಲು ಆಗದಿದ್ದರೆ ಆನ್‌ಲೈನ್ ತರಗತಿ ಮಾಡಿ ಪರೀಕ್ಷೆ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯಾರದ್ದೋ ಮಾತನ್ನು ಕೇಳಿಕೊಂಡು ವಿಧ್ಯಾರ್ಥಿನಿಯರು ವಿವಾದ ಸೃಷ್ಠಿಸಿದ್ದು, ಕಾಲೇಜಿನಲ್ಲಿ ಶಿಸ್ತು ಎಂಬುದು ಅತಿ ಅಗತ್ಯ. ಹಾಗಾಗಿ ಕಾಲೇಜು ಮತ್ತು ಮಕ್ಕಳ ಭವಿಷ್ಯದ ಹಿನ್ನೆಲೆಯಲ್ಲಿ ಪೋಷಕರು ಮಕ್ಕಳಿಗೆ ತಿಳಿಹೇಳಿ ಈ ಹಿಂದೆ ಇದ್ದ ಪದ್ಧತಿ ಮುಂದುವರೆಸಲು ಅವಕಾಶ ಕಲ್ಪಿಸಬೇಕು. ನಾವು ಯಾವುದೇ ಕಾರಣಕ್ಕೂ ಆ ಪದ್ಧತಿಯನ್ನು ಬದಲಾಯಿಸುವುದಿಲ್ಲ ಎಂದರು. ಸ್ಕಾರ್ಫ್ ವಿಚಾರವಾಗಿ ಸರಕಾರ ಯಥಾಸ್ಥಿತಿ ಕಾಪಾಡುವಂತೆ ಹೊರಡಿಸಿದೆ.

ಈ ಆರು ಮಕ್ಕಳ ಪೋಷಕರನ್ನು ಪ್ರಾಂಶುಪಾಲರು ಕರೆದು, ಹಿಜಾಬ್ ಧರಿಸದೆ ತರಗತಿ ಬರುವಂತೆ ಮನವಿ ಮಾಡಲಿದ್ದಾರೆ. ಈಗಾಗಲೇ ಒಂದೂವರೆ ವರ್ಷ ಹಿಜಾಬ್ ಇಲ್ಲದೆ ಈ ವಿದ್ಯಾರ್ಥಿನಿಯರು ತರಗತಿಗೆ ಬಂದಿದ್ದಾರೆ. ಇನ್ನೂ ಕೇವಲ ಒಂದು ತಿಂಗಳು ಮಾತ್ರ ತರಗತಿ ಇರುತ್ತದೆ. ಆ ನಂತರ ಪರೀಕ್ಷೆ ನಡೆಯುತ್ತದೆ. ಒಂದು ವೇಳೆ ವಿದ್ಯಾರ್ಥಿನಿಯರು ಹಾಗೂ ಪೋಷಕರು ಹಿಜಾಬ್ ಇಲ್ಲದೆ ಬರಲು ಒಪ್ಪದಿದ್ದರೆ ನಾವು ತರಗತಿ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ. ಅವರಿಗೆ ಬೇಕಾದರೆ ಆನ್‌ಲೈನ್ ತರಗತಿ ಮಾಡಿ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗುವುದು. ಮುಂದಿನ ವರ್ಷ ಯಾವ ಕಾಲೇಜಿಗೆ ಬೇಕಾದರೂ ಅವರು ಸೇರಿಕೊಳ್ಳಬಹುದು ಎಂದರು.