Connect with us

    KARNATAKA

    ಪಿಯು ಪರೀಕ್ಷೆಗೆ ಹಿಜಾಬ್‌ ಧರಿಸಿ ಬರಲು ಅವಕಾಶವಿಲ್ಲ

    ಬೆಂಗಳೂರು, ಮಾರ್ಚ್ 02: ಇದೇ 9ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡಬೇಕೆಂಬ ಮುಸ್ಲಿಂ ವಿದ್ಯಾರ್ಥಿನಿಯರ ಮನವಿಯನ್ನು ಪರಿಗಣಿಸದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಸೂಚಿಸಿದೆ.

    ‘ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದಾರೆ’ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

    ‘ಹಿಜಾಬ್‌ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಾಗಿ, ಪರೀಕ್ಷೆಯ ಸಮಯದಲ್ಲಿ ಹಿಜಾಬ್ ಅನುಮತಿಸುವ ಪ್ರಶ್ನೆಯೇ ಇಲ್ಲ’ ಎಂದು ಶಾಲಾ ಶಿಕ್ಷಣ ಸಚಿವಬಿ.ಸಿ. ನಾಗೇಶ್ ತಿಳಿಸಿದರು. ಅಲ್ಲದೆ, ‘ಈ ಕಾರಣಕ್ಕೆ ಯಾವುದೇ ವಿದ್ಯಾರ್ಥಿನಿ ಪರೀಕ್ಷೆಗೆ ಗೈರಾಗುತ್ತಾರೆ ಎಂದೂ ಭಾವಿಸುವುದಿಲ್ಲ’ ಎಂದೂ ಹೇಳಿದರು.

    ದ.ಕ. ಜಿಲ್ಲೆಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣ ಹೆಚ್ಚಳ: ಪ್ರಮೀಳಾ ನಾಯ್ಡು

    ‘ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯ ಭಾಗ ಅಲ್ಲ’ ಎಂದು ರಾಜ್ಯ ಹೈಕೋರ್ಟ್‌ ಕಳೆದ ವರ್ಷ ಮಾರ್ಚ್‌ನಲ್ಲಿ ಅಭಿಪ್ರಾಯಪಟ್ಟಿತ್ತು. ವಿದ್ಯಾರ್ಥಿಗಳು ನಿಗದಿಪಡಿಸಿದ ಸಮವಸ್ತ್ರವನ್ನು ಧರಿಸಬೇಕು ಎಂಬ 2022 ಫೆ. 5ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply