LATEST NEWS
ಉಡುಪಿ ಹಿಜಬ್ ವಿವಾದ – ಕಾಲೇಜು ವರ್ತನೆ ವಿರುದ್ಧ ಶಶಿ ತರೂರ್, ಮೆಹಬೂಬಾ ಮುಫ್ತಿ ಕಿಡಿ

ಉಡುಪಿ ಫೆಬ್ರವರಿ 04: ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ಇದೀಗ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದು, ಹಿಜಬ್ ಧರಿಸಿ ಬಂದ ವಿಧ್ಯಾರ್ಥಿನಿಯರನ್ನು ತರಗತಿ ಪ್ರವೇಶಕ್ಕೆ ನಿರಾಕರಿಸಿದ ವಿಚಾರಕ್ಕೆ ರಾಷ್ಟ್ರಮಟ್ಟದ ರಾಜಕೀಯ ಮುಖಂಡರು ಕಿಡಿಕಾರಿದ್ದಾರೆ.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಮೆಹಬೂಬಾ ಮುಫ್ತಿಯವರು, ಸರ್ಕಾರ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ನೀಡಿದ ಬೇಟಿ ಬಚಾವೋ ಬೇಟಿ ಪಢಾವೋ ಘೋಷವಾಕ್ಯಗಳೆಲ್ಲಾ ಬರೀ ಟೊಳ್ಳು. ಮುಸ್ಲಿಂ ಹೆಣ್ಣುಮಕ್ಕಳು ತಮ್ಮ ಸಾಂಪ್ರದಾಯಿಕ ಉಡುಗೆ ಧರಿಸಿದ್ದಕ್ಕೆ ಅವರನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ತರೂರ್ ಟ್ವೀಟ್ ಮಾಡಿ, ಪ್ರತಿಯೊಬ್ಬರೂ ತಮಗೆ ಬೇಕಾದುದನ್ನು ಧರಿಸಲು ಸ್ವತಂತ್ರರು ಎಂಬುದು ಭಾರತದ ಶಕ್ತಿಯಾಗಿದೆ. ಹಿಜಾಬ್ ಅನ್ನು ಅನುಮತಿಸದಿದ್ದರೆ, ಸಿಖ್ ಪೇಟದ ಬಗ್ಗೆ ಏನು? ಹಿಂದೂಗಳ ಹಣೆಯ ಗುರುತು? ಕ್ರಿಶ್ಚಿಯನ್ನರ ಶಿಲುಬೆಗೆ ಯಾಕೆ ಅನುಮತಿ ನೀಡಲಾಗಿದೆ ವಿದ್ಯಾರ್ಥಿನಿಯರನ್ನು ಒಳಗೆ ಬಿಡಿ,ಓದಲು ಬಿಡಿ, ವಸ್ತ್ರಧಾರಣೆಯ ನಿರ್ಧಾರ ಸಂತ್ರಸ್ಥರು ನಿರ್ಧರಿಸಲಿ ಎಂದು ತಿಳಿಸಿದ್ದಾರೆ