DAKSHINA KANNADA
ಉಪ್ಪಿನಂಗಡಿ ಡಿಗ್ರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ 6 ವಿಧ್ಯಾರ್ಥಿನಿಯರು ಸಸ್ಪೆಂಡ್
ಉಪ್ಪಿನಂಗಡಿ ಜೂನ್ 2: ಹೈಕೋರ್ಟ್ ಹಾಗೂ ರಾಜ್ಯ ಸರಕಾರದ ಆದೇಶದ ಹೊರತಾಗಿಯೂ ಹಿಜಬ್ ಧರಿಸಿ ತರಗತಿ ಪ್ರವೇಶಿಸಿದ 6 ಮಂದಿ ವಿಧ್ಯಾರ್ಥಿನಿಯರನ್ನು ಮುಂದಿನ ಆದೇಶದ ವರೆಗೆ ಪ್ರಾಂಶುಪಾಲರು ಅಮಾನತುಗೊಳಿಸಿದ್ದಾರೆ.
ಯಾವುದೇ ಕಾರಣಕ್ಕೂ ತರಗತಿಗೆ ಧರಿಸಿಕೊಂಡು ಬರಬಾರದೆಂಬ ಸರ್ಕಾರದ ಆದೇಶ ಹಾಗೂ ಹೈಕೋರ್ಟ್ ತೀರ್ಪನ್ನು ಪಾಲಿಸದೆ ಪದೇ ಪದೇ ಆದೇಶ ಉಲ್ಲಂಘಿಸುತ್ತಿದ್ದರು. ಕಾಲೇಜಿನ ಕಲಿಕಾ ವಾತಾವರಣಕ್ಕೆ ವಿರುದ್ಧವಾಗಿ ವರ್ತಿಸಿದ್ದ 6 ಮಂದಿ ವಿದ್ಯಾರ್ಥಿನಿಯರನ್ನು ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಅಮಾನತು ಮಾಡಲಾಗಿದೆ.