LATEST NEWS
ನಮ್ಮ ಮೇಲೆ ಕ್ರಿಮಿನಲ್ ಕೇಸು ಹಾಕಲು ಇಲ್ಲಿ ಯಾವ ಅಪರಾಧ ನಡೆದಿದೆ? – ಹಿಜಬ್ ಹೋರಾಟಗಾರ್ತಿ ಆಲಿಯಾ ಪ್ರಶ್ನೆ

ಉಡುಪಿ ಎಪ್ರಿಲ್ 23: ಮತ್ತೆ ಪಿಯುಸಿ ಪರೀಕ್ಷೆ ಸಂದರ್ಭ ಹಿಜಬ್ ವಿವಾದ ಮಾಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ ಎಂದು ರಘುಪತಿ ಭಟ್ ಎಚ್ಚರಿಕೆಗೆ ಇದೀಗ ಉಡುಪಿಯ ಹಿಜಬ್ ಹೋರಾಟಗಾರ್ತಿ ಆಲಿಯಾ ಅಸಾದಿ ನಮ್ಮ ಮೇಲೆ ಕ್ರಿಮಿನಲ್ ಕೇಸು ಹಾಕಲು ಇಲ್ಲಿ ಯಾವ ಅಪರಾಧ ನಡೆದಿದೆ? ಎಂದು ಪ್ರಶ್ನೆ ಮಾಡಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರು ಅವರು ಪರೀಕ್ಷಾ ಕೇಂದ್ರದಲ್ಲಿ ನನಗೆ ಮತ್ತು ರೇಶಂಗೆ ಪರೀಕ್ಷೆ ಬರೆಯಲು ಸಿಬ್ಬಂದಿ ನಿರಾಕರಿಸಿದ್ದಾರೆ. ನಾವು ಮತ್ತೆ ಮತ್ತೆ ನಿರಾಸೆಗೆ ಒಳಗಾಗುತ್ತಿದ್ದಾರೆ.

ಕ್ರಿಮಿನಲ್ ಕೇಸು, ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಶಾಸಕ ರಘುಪತಿ ಭಟ್ ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್ ಕೇಸು ಹಾಕಲು ಇಲ್ಲಿ ಯಾವ ಅಪರಾಧ ನಡೆದಿದೆ? ನಮ್ಮ ದೇಶ ಎತ್ತ ಸಾಗುತ್ತಿದೆ? ಎಂದು ಪೋಸ್ಟ್ ಮಾಡಿದ್ದಾರೆ.