LATEST NEWS
ಕುಂದಾಪುರ ಸರಕಾರಿ ಕಾಲೇಜಿನಲ್ಲಿ ಕೇಸರಿ Vs ಹಿಜಬ್….!!
ಕುಂದಾಪುರ : ಉಡುಪಿಯಲ್ಲಿ ಹಿಜಾಬ್ ವಿವಾದ ಇನ್ನು ತಣ್ಣಾಗಾಗುವ ಮೊದಲೇ ಇದೀಗ ಕುಂದಾಪುರದಲ್ಲಿ ಹಿಜಾಬ್ vs ಕೇಸರಿ ವಿವಾದ ಬುಗಿಲೆದ್ದಿದ್ದು. ವಿಧ್ಯಾರ್ಥಿನಿಯರ ಪೋಷಕರು ಹಿಜಬ್ ಗೆ ಪಟ್ಟು ಹಿಡಿದಿದ್ದು, ಕೆಲವು ವಿಧ್ಯಾರ್ಥಿಗಳು ಕೇಸರಿ ಶಾಲಿನೊಂದಿಗೆ ಕಾಲೇಜಿಗೆ ಆಗಮಿಸಿದ್ದಾರೆ.
ಉಡುಪಿ ಸರಕಾರಿ ಕಾಲೇಜಿನ ಹಿಜಾಬ್ ವಿವಾದ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು, ಇದರ ಬೆನ್ನಲ್ಲೆ ಉಡುಪಿ ಜಿಲ್ಲೆಯ ಕುಂದಾಪುರದ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಹಿಜಾಬ್ ಕೇಸರಿ ಶಾಲು ವಿವಾದ ಎದ್ದಿದ್ದು ಸ್ಥಳೀಯರು ಶಾಸಕರು ಸಂಧಾನ ನಡೆಸಲು ಪ್ರಯತ್ನಿಸಿದ್ದಾರೆ.
ಈಗಾಗಲೇ ಸರಕಾರಿ ಶಾಲೆಗಳಲ್ಲಿ ವಸ್ತ್ರಸಂಹಿತೆ ಹೊರತಾಗಿ ಬೇರೆ ಬಟ್ಟೆಗಳಿಗೆ ಅವಕಾಶ ಇಲ್ಲ ಎಂದು ಸಚಿವರು ಸೂಚನೆ ನೀಡಿದ್ದು, ಸಮವಸ್ತ್ರದ ಹೊರತಾಗಿ ಇತರ ವಸ್ತ್ರ ಧರಿಸಿದರೆ ಕಾಲೇಜು ಆವರಣದೊಳಗೆ ಪ್ರವೇಶ ಇಲ್ಲ.ಈ ಬಗ್ಗೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಈ ಆದೇಶದ ವಿರುದ್ದ ವಿಧ್ಯಾರ್ಥಿನಿಯರ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹಿಜಾಬ್ ಕುರಿತಾಗಿ ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರ ಜತೆ ಮಾತುಕತೆ ನಡೆಸಿದ್ದು, ಸಂಧಾನ ವಿಫಲವಾಗಿದೆ.
ವಿಧ್ಯಾರ್ಥಿನಿಯರು ಹಿಜಬ್ ಧರಿಸಿ ಬಂದಿರುವುದಕ್ಕೆ ವಿರುದ್ದ ವಾಗಿ ಕೆಲವು ವಿಧ್ಯಾರ್ಥಿಗಳು ಕೇಸರಿ ಶಾಲನ್ನು ಹಾಕಿ ತರಗತಿಗೆ ಬಂದಿದ್ದಾರೆ.