Connect with us

    LATEST NEWS

    ಮಂಗಳೂರಿನಲ್ಲಿ ಮರುಕಳಿಸಿದ ನೈತಿಕ ಪೊಲೀಸ್ ಗಿರಿ

    ಮಂಗಳೂರಿನಲ್ಲಿ ಮರುಕಳಿಸಿದ ನೈತಿಕ ಪೊಲೀಸ್ ಗಿರಿ

    ಮಂಗಳೂರು ಜನವರಿ 2: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಮರುಕಳಿಸಿದೆ. ಮಂಗಳೂರಿನ ಪ್ರಸಿದ್ದ ಪ್ರವಾಸಿ ತಾಣ ಪಿಲಿಕುಳ ನಿಸರ್ಗಧಾಮದಲ್ಲಿ ನೈತಿಕ ಪೊಲೀಸ್ ಗಿರಿ ನಡೆದ ಬಗ್ಗೆ ವರದಿಯಾಗಿದೆ.

    ಪಿಲಿಕುಳು ನಿಸರ್ಗಧಾಮದ ಮಾನಸ ವಾಟರ್ ಪಾರ್ಕ್ ನಲ್ಲಿ ಈ ಘಟನೆ ನಡೆದಿದೆ. ಪಿಲಿಕುಳ ನಿಸರ್ಗಧಾಮದ ಮಾನಸ ವಾಟರ್ ಪಾರ್ಕ್ ಗೆ ಮೋಜಿಗೆ ಬಂದಿದ್ದ ಕಾಲೇಜು ವಿಧ್ಯಾರ್ಥಿ ಹಾಗೂ ವಿಧ್ಯಾರ್ಥಿನಿಯರು ಬಂದಿದ್ದರು. ಅನ್ಯಕೋಮಿನ ಯುವಕರು ಮತ್ತೊಂದು ಕೋಮಿನ ಯುವತಿಯರೊಂದಿಗೆ ಮೋಜು ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಅನ್ಯಕೋಮಿನ ಎರಡು ಜೋಡಿಗಳಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ.

    ಈ ಘಟನೆ ನಡೆಯುವಾಗ ಸ್ಥಳದಲ್ಲಿ ಪೊಲೀಸರಿದ್ದರು ಅವರ ಎದುರೇ ಹಿಂದೂ ಸಂಘಟನೆಯ ಕಾರ್ಯಕರ್ತರು ವಿಧ್ಯಾರ್ಥಿಗಳಿಗೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮಂಗಳೂರಿನ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದು ಯುವಕ ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ.

    VIDEO

    Share Information
    Advertisement
    Click to comment

    You must be logged in to post a comment Login

    Leave a Reply