DAKSHINA KANNADA
ಹಿಂದೂ ಮುಖಂಡರ ಮೇಲೆ ಹಲ್ಲೆ ಪ್ರಕರಣ, ಸಂಪ್ಯ ಪೋಲೀಸ್ ವಿರುದ್ಧ ಕಾನೂನು ಕ್ರಮಕ್ಕೆ ಸಿದ್ಧತೆ
ಹಿಂದೂ ಮುಖಂಡರ ಮೇಲೆ ಹಲ್ಲೆ ಪ್ರಕರಣ, ಸಂಪ್ಯ ಪೋಲೀಸ್ ವಿರುದ್ಧ ಕಾನೂನು ಕ್ರಮಕ್ಕೆ ಸಿದ್ಧತೆ
ಪುತ್ತೂರು, ಡಿಸೆಂಬರ್ 20: ಅಪ್ರಾಪ್ತ ಬಾಲಕಿಯ ಮೇಲಿನ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪೋಲೀಸ್ ಠಾಣೆಗೆ ತೆರಳಿದ ಹಿಂದೂ ಮುಖಂಡರ ಮೇಲೆ ಪೋಲೀಸರು ದೌರ್ಜನ್ಯ ಎಸಗಿದ್ದಾರೆ.
ಈ ಸಂಬಂಧ ಪೋಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಹಿಂದೂ ಹಿತರಕ್ಷಣಾ ವೇದಿಕೆ ಎಚ್ಚರಿಸಿದೆ.
ಪುತ್ತೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಹಿತರಕ್ಷಣಾ ವೇದಿಕೆಯ ಚನಿಲ ತಿಮ್ಮಪ್ಪ ಹಿಂದೂ ಜಾಗರಣ ವೇದಿಕೆಯ ಮುಖಂಡ ಅಜಿತ್ ರೈ ಮೇಲೆ ಪೂರ್ವದ್ವೇಷವಿಟ್ಟು ಸಂಪ್ಯ ಪೋಲೀಸ್ ಠಾಣೆಯ ಪೋಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು.
ಬಡಗನ್ನೂರು ಗ್ರಾಮದ ಮೈಂದನಡ್ಕ ಎಂಬಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಯೂಸುಫ್ ಎನ್ನುವ ವ್ಯಕ್ತಿ ದೌಜನ್ಯ ಎಸಗಿದ್ದು, ಈತನ ಮೇಲೆ ಕ್ರಮ ಕೈಗೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಹಿಂದೂ ಸಂಘಟನೆಗಳ ಮುಖಂಡರು ಠಾಣೆಯ ಮುಂದೆ ಸೇರಿದ್ದರು.
ಎರಡೂ ಗುಂಪಿನ ಕಾರ್ಯಕರ್ತರು ಠಾಣೆಯ ಮುಂದೆ ಸೇರಿದ ಪರಿಣಾಮ ಪೋಲೀಸರು ಲಾಠಿಚಾರ್ಚ್ ಮಾಡಿದ್ದಾರೆ.
ಇದಕ್ಕೆ ತಮ್ಮ ವಿರೋಧವಿಲ್ಲ ಆದರೆ ಹಿಂದೂ ಮುಖಂಡರನ್ನು ಪೋಲೀಸರು ಠಾಣೆಯ ಒಳಗೆ ಕರೆಸಿಕೊಂಡು ಹೀನಾಯವಾಗಿ ಹಲ್ಲೆ ನಡೆಸಿರುವುದು ಖಂಡನೀಯವಾಗಿದೆ.
ಕಾಂಗ್ರೇಸ್ ಸರಕಾರ ಪೋಲೀಸ್ ಇಲಾಖೆಯನ್ನು ಬಳಸಿಕೊಂಡು ಹಿಂದೂ ಕಾರ್ಯಕರ್ತರು ಹಾಗೂ ಮುಖಂಡರ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ.
ಜಿಲ್ಲೆಯಲ್ಲಿ ಇಂಥಹ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದು, ಪೋಲೀಸ್ ಇಲಾಖೆ ಈ ವಿಚಾರದಲ್ಲಿ ಗೊಂದಲವನ್ನುಂಟು ಮಾಡಿದೆ ಎಂದು ಆರೋಪಿಸಿದರು.
ಈ ದೌರ್ಜನ್ಯವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ವೇದಿಕೆ ಜನವರಿ 2 ರಂದು ಪುತ್ತೂರಿನಲ್ಲಿ ಬೃಹತ್ ಪ್ರತಿಭಟನಾ ರಾಲಿಯನ್ನು ನಡೆಸಲಿದೆ. ಅಲ್ಲದೆ ಹಲ್ಲೆ ನಡೆಸಿದ ಸಂಪ್ಯ ಪೋಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
You must be logged in to post a comment Login