LATEST NEWS
ಬೀಚ್ ನಲ್ಲಿ ನಮಾಜ್..ಕ್ರಮಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ
ಉಡುಪಿ ಮಾರ್ಚ್ 15: ಅಂತರಾಷ್ಟ್ರೀಯ ಮಾನ್ಯತೆ ಪಡೆದಿರುವ ಪಡುಬಿದ್ರಿ ಬೀಚ್ ನಲ್ಲಿ ನಮಾಜ್ ಮಾಡಲು ಮುಂದಾಗಿ ಅಲ್ಲಿನ ಸಿಬ್ಬಂದಿಗಳ ಜೊತೆ ಮಾತಿನಚಕಮಕಿ ನಡೆಸಿರುವುದನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿದೆ. ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಮತೀಯ ಚಟುವಟಿಕೆ ನಡೆಸುವ ಮೂಲಕ ಅಶಾಂತಿ ಸೃಷ್ಠಿಸಲು ಹುನ್ನಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದು, ಜಿಲ್ಲಾಡಳಿತ ಈ ಕುರಿತಂತೆ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದೆ.
ಉಡುಪಿ ಜಿಲ್ಲೆಯ ಬ್ಲೂಪ್ಲಾಗ್ ಮಾನ್ಯತೆ ಪಡೆದಿರುವ ಪಡುಬಿದ್ರಿ ಬೀಚ್ ಗೆ ಪ್ರವಾಸಕ್ಕೆ ಬಂದಿದ್ದ ತಂಡವೊಂದರ ಯುವಕನೊಬ್ಬ ಸಂಜೆ ಸಂದರ್ಭ ನಮಾಜ್ ಮಾಡಲು ಮುಂದಾಗಿದ್ದಾರೆ. ಈ ಹಿನ್ನಲೆ ಸ್ಥಳಕ್ಕೆ ಆಗಮಿಸಿದ ಬೀಚ್ ನ ಸಿಬ್ಬಂದಿಗಳು ಬೀಚ್ ನ ನಿಯಮಗಳ ಪ್ರಕಾರ ಇಲ್ಲಿ ಯಾವುದೇ ಧಾರ್ಮಿಕ ಚುಟುವಟಿಕೆ ಗೆ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ. ಆದರೆ ಯುವಕನ ಜೊತೆಗೆ ಆಗಮಿಸಿದ್ದ ಕುಟುಂಬಸ್ಥರು ಬೀಚ್ ಸಿಬ್ಬಂದಿಗಳ ಜೊತೆ ಮಾತಿನ ಚಕಮಕಿ ನಡೆಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಘಟನೆ ಕುರಿತಂತೆ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಈ ಕುರಿತಂತೆ ಮಾತನಾಡಿದ ಹಿಂದೂ ಜಾಗರಣ ವೇದಿಕೆ ಮುಖಂಡ ಗುರುಪ್ರಸಾದ್ ಆಚಾರ್ಯ ಕೆಲವರು ಸಾರ್ವಜನಿಕ ಸ್ಥಳಗಳಲ್ಲಿ ಮತೀಯ ಚಟುವಟಿಕೆ ನಡೆಸುವ ಮೂಲಕ ಅಶಾಂತಿ ಸೃಷ್ಟಿಸುತ್ತಿದ್ದಾರೆ. ಈ ಹಿಂದೆ ಪಡುಬಿದ್ರೆ ಅಶ್ವತ್ಥಕಟ್ಟೆಯಲ್ಲಿ ಕೆಲದಿನಗಳ ಹಿಂದೆ ನಾಗನ ಕಲ್ಲುಗಳನ್ನು ಕಿತ್ತೆಸೆದು ಧಾರ್ಮಿಕ ಭಾವನೆಗೆ ಧಕ್ಕೆ ಮಾಡಲಾಗಿತ್ತು . ಈ ಹಿನ್ನಲೆ ಜಿಲ್ಲಾಡಳಿತ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.