LATEST NEWS
ಕುಡುಪುವಿನಲ್ಲಿ ಸಾಕ್ಷಿ ಇಲ್ಲದಿದ್ದರೂ 22 ಜನ ಅರೆಸ್ಟ್ – ಸುಹಾಸ್ ಶೆಟ್ಟಿ ಹತ್ಯೆ ಕೇವಲ 8 ಜನ ಅರೆಸ್ಟ್ – ಹಿಂದು ಮಹಾಸಭಾ

ಮಂಗಳೂರು ಮೇ 07: ಕುಡುಪುವಿನಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಯಾವುದೇ ಸಾಕ್ಷಿ ಇಲ್ಲದಿದ್ದರೂ ಪೊಲೀಸರು 22 ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಸುಹಾಸ್ ಕೊಲೆ ಕೃತ್ಯದಲ್ಲಿ ಅನೇಕ ಸಾಕ್ಷಿಗಳಿದ್ದರೂ ಎಂಟು ಮಂದಿಯನ್ನು ಮಾತ್ರ ಬಂಧಿಸಿದ್ದು ಯಾಕೆ ಎಂದು ಹಿಂದೂ ಮಹಾಸಭಾ ಪ್ರಶ್ನಿಸಿದೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಿಂದು ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಹಣಕಾಸು ನೆರವು ನೀಡಿದವರು, ಸಪೋರ್ಟ್ ಮಾಡಿದವರು ಹೀಗೆ ಎಲ್ಲರನ್ನೂ ಬಂಧನ ಮಾಡಬೇಕಿತ್ತಲ್ವಾ. ಕಾಂಗ್ರೆಸ್ ನಾಯಕರು ಹೇಳಿದಂತೆ ಪೊಲೀಸರು ಮಾಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. ಸುಹಾಸ್ ಶೆಟ್ಟಿ ಒಬ್ಬ ಹಿಂದು ಸಂಘಟನೆ ಕಾರ್ಯಕರ್ತ, ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಆತನನ್ನು ಕೇವಲ ರೌಡಿಶೀಟರ್ ಎನ್ನುವ ಮೂಲಕ ಕೀಳು ಮಟ್ಟಕ್ಕಿಳಿಸುತ್ತಿದ್ದಾರೆ. ಹಿಂದುತ್ವಕ್ಕಾಗಿ ಕೆಲಸ ಮಾಡಿದ್ದಕ್ಕೆ ಪೊಲೀಸರು ರೌಡಿ ಪಟ್ಟ ನೀಡಿದ್ದರು. ಅಂಥ ವ್ಯಕ್ತಿಯನ್ನು ಕಾಂಗ್ರೆಸ್ ಸರಕಾರ ನೀಡಿದ್ದ ಪರಿಹಾರದ ಹಣದಿಂದಲೇ ಫಾಜಿಲ್ ಕುಟುಂಬ ಕೊಲೆ ಮಾಡಿಸಿದೆ. ಸರಕಾರ ಕೂಡಲೇ ಈ ಹಣವನ್ನು ವಾಪಸ್ ಪಡೆಯಬೇಕು

ಕಾಂಗ್ರೆಸಿಗರಿಗೆ ಕೇವಲ ಮುಸ್ಲಿಮರು ಮಾತ್ರ ಬೇಕು, ಹಿಂದುಗಳು ಬೇಕಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹಿಂದು, ಮುಸ್ಲಿಮರು, ಕ್ರೈಸ್ತರು ಎಲ್ಲರೂ ಮತ ಹಾಕಿದ್ದಾರೆ. ಜಾಲತಾಣದಲ್ಲಿ ಕಮೆಂಟ್ ಮಾಡಿದ ಹಿಂದುಗಳನ್ನೆಲ್ಲ ಹುಡುಕಿ ಅರೆಸ್ಟ್ ಮಾಡುತ್ತಿದ್ದಾರೆ. ಮುಸ್ಲಿಮರನ್ನು ಯಾಕೆ ಬಂಧನ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು. ಸುಹಾಸ್ ಕೊಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಕೈವಾಡ ಇದೆ, ಬಿಜೆಪಿಗೆ ಹಿಂದುತ್ವ ಕೇವಲ ರಾಜಕೀಯಕ್ಕೆ ಮಾತ್ರ. ಎರಡೂ ಪಕ್ಷಗಳು ರಾಜಕೀಯ ಲಾಭಕ್ಕೆ ನೋಡುತ್ತಿದ್ದಾರೆ ಎಂದು ಹೇಳಿದರು. ಗೋಷ್ಟಿಯಲ್ಲಿ ಧರ್ಮೇಂದ್ರ ಅಮೀನ್ ಮತ್ತಿತರರಿದ್ದರು.