Connect with us

    DAKSHINA KANNADA

    ಮೀನು ಅಂಗಡಿಗೆ ಬೆಂಕಿ ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

    ಉಪ್ಪಿನಂಗಡಿ ಸೆಪ್ಟೆಂಬರ್ 06: ಕಳೆದ ಕೆಲ ದಿನಗಳ ಹಿಂದೆ ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಬಳಿಯಯ ಮೀನಿನ ಅಂಗಡಿಗೆ ಬೆಂಕಿ ಹಚ್ಚಿ ನಾಶ ಮಾಡಿದ್ದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.


    ಉಪ್ಪಿನಂಗಡಿ ಹಳೇಗೇಟು ಬಳಿ ಕೆಲ ದಿನಗಳ ಹಿಂದೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೀನು ಮಾರಾಟದ ಅಂಗಡಿಗೆ ಬೆಂಕಿ ಹಚ್ಚಿ ನಾಶ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನುಶೀಘ್ರವಾಗಿ ಪತ್ತೆ ಹಚ್ಚುವಂತೆ ಹಿಂದೂ ಸಂಘಟನೆಗಳು ಈ ಹಿಂದೆ ರಸ್ತೆ ಬಂದ್ ಮಾಡಿ ಪೊಲೀಸ್ ಇಲಾಖೆಗೆ ಆಗ್ರಹಿಸಿದ್ದವು, ಅಲ್ಲದೆ ಸೆಪ್ಟೆಂಬರ್ 5ರವರೆಗೆ ಆರೋಪಿಗಳ ಬಂಧನಕ್ಕೆ ಗಡುವು ನೀಡಲಾಗಿತ್ತು.‌

    ಆದರೆ ಇಲ್ಲಿಯವರೆಗೆ ಆರೋಪಿಗಳ ಬಂಧನವಾಗದ ಹಿನ್ನಲೆ ಇದೀಗ ಬೆಂಕಿ ಹಚ್ಚಿರುವ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆ ಮುಂದೆ ಧರಣಿ ನಡೆಸಿದರು. ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *