Connect with us

LATEST NEWS

ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ – ತಕ್ಷಣ ತಡೆಹಿಡಿಯಲು ಸಚಿವ ಕೋಟ ಆದೇಶ

ಮಂಗಳೂರು: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ತಸ್ತೀಕ್‌ ಹಣವನ್ನು ಅನ್ಯ ಧರ್ಮಗಳ ಪ್ರಾರ್ಥನಾ ಮಂದಿರಗಳಿಗೆ ನೀಡುವುದನ್ನು ತಡೆಹಿಡಿಯಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.


ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸರ್ಕಾರ ಬರುವ ಮುಂಚೆ ಇಲಾಖೆಯ ಮೂಲಕ ಮಂಜೂರಾಗುತ್ತಿರುವ ತಸ್ತೀಕ್ ಹಣ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಕೂಡ ಬಿಡುಗಡೆ ಮಾಡುತ್ತಿರುವ ಬಗ್ಗೆ ಮಾಹಿತಿ ಒದಗಿದ್ದು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ಮೂಲಕ ಹಿಂದೂ ಧರ್ಮವನ್ನು ಹೊರತುಪಡಿಸಿ ಅನ್ಯ ಉದ್ದೇಶಗಳಿಗೆ ಬಳಸುತ್ತಿರುವುದನ್ನು ತಕ್ಷಣ ತಡೆಹಿಡಿಯಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆ ಯಲ್ಲಿನ ಅನುದಾನ, ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ರಾಜ್ಯದಲ್ಲಿ ನಮ್ಮ ಸರ್ಕಾರ ಬರುವ ಮುಂಚೆ ಇಲಾಖೆಯ ಮೂಲಕ ಮಂಜೂರಾಗುತ್ತಿರುವ ತಸ್ತೀಕ್ ಹಣ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಕೂಡ ಬಿಡುಗಡೆ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆತಿತ್ತು’ ಎಂದು ಹೇಳಿದ್ದಾರೆ.

‘ರಾಜ್ಯದಲ್ಲಿ 27 ಸಾವಿರಕ್ಕೂ ಹೆಚ್ಚು ಹಿಂದೂ ದೇವಸ್ಥಾನಗಳಿಗೆ ತಸ್ತೀಕ್ ನೀಡಲಾಗುತ್ತಿದ್ದು, ಸರ್ಕಾರ ಸುಮಾರು ₹133 ಕೋಟಿ ವಾರ್ಷಿಕ ಅನುದಾನ ನೀಡುತ್ತಿದೆ. ಈ ಪೈಕಿ ಸುಮಾರು 764 ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳು ಇಲಾಖೆಯಿಂದ ತಸ್ತೀಕ್ ಪಡೆಯುತ್ತಿದ್ದು, ಸಚಿವರ ಸೂಚನೆ ಮೇರೆಗೆ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಹಣ ಬಿಡುಗಡೆ ಮಾಡುವುದನ್ನು ನಿಲ್ಲಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.