Connect with us

    LATEST NEWS

    ಧಾರ್ಮಿಕ ದತ್ತಿ ಇಲಾಖೆ ಒಳಪಡುವ ದೇವಸ್ಥಾನಗಳಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲು ಜಿಲ್ಲಾಧಿಕಾರಿಗೆ ಮನವಿ…!!

    ಮಂಗಳೂರು ಸೆಪ್ಟೆಂಬರ್ 15: ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ಜಾತ್ರಾಮಹೋತ್ಸವ, ಬ್ರಹ್ಮಕಲಶೋತ್ಸನ, ನೇಮೋತ್ಸವ ಸಂದರ್ಭದಲ್ಲಿ ಹಿಂದೂ ಧರ್ಮದವರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ದಕ್ಷಿಣ ಕನ್ನಡ ಜಿಲ್ಲಾ ಸಂಘಟನೆಯ ವತಿಯಿಂದ ದಕ್ಷಿಣಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.


    ಅಲ್ಲದೆ ವ್ಯಾಪಾರದ ಸ್ಥಳಗಳ ಹರಾಜು ಪ್ರಕ್ರಿಯೆ ಸಂದರ್ಭದಲ್ಲಿ ಮಧ್ಯವರ್ತಿಗಳನ್ನ ಬಳಸಿಕೊಳ್ಳದೆ ನೇರ ಆಡಳಿತ ಮಂಡಳಿಯವರು ಹಾಗು ಧಾರ್ಮಿಕ ಇಲಾಖೆಯ ಅಧಿಕಾರಿಗಳು ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಕಡಿಮೆ ದರದಲ್ಲಿ ಸನಾತನ ಹಿಂದೂ ಜಾತ್ರಾ ಬಡ ವ್ಯಾಪಾರಸ್ಥರಿಗೆ ಅವಕಾಶ ಮಾಡಿಕೊಡಬೇಕೆಂದು ಮನವಿಯಲ್ಲಿ ವಿನಂತಿಸಲಾಯಿತು.

    ಅಲ್ಲದೆ ದೇವಸ್ಥಾನಗಳ ಕಾರ್ಯಕ್ರಮಗಳು ಮುಗಿದ ನಂತರ ವ್ಯಾಪಾರ ನಡೆದ ಸ್ಥಳದಲ್ಲಿ ಶುಚಿತ್ವವನ್ನು ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಸದಸ್ಯರೆಲ್ಲರೂ ಸ್ವಚ್ಚ ಮಾಡುವ ಕಾರ್ಯದಲ್ಲಿ ದೈವಸ್ಥಾನ ದೇವಸ್ಥಾನದ ಆಡಳಿತ ಮಂಡಳಿಯವರೊಂದಿಗೆ ಕೈಜೋಡಿಸುತ್ತೇವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

    ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಹಾಗು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ದಿನೇಶ್ ಆಮ್ಟೂರು ಹಾಗು ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಜಯರಾಮ್ ಶೆಟ್ಟಿಗಾರ್ ಕಲ್ಲಡ್ಕ ಹಾಗು ಗೌರವಾಧ್ಯಕ್ಷರಾದ ರವೀಂದ್ರನಾಥ್ ಇವರುಗಳು ಮನವಿ ನೀಡಿ ವಿನಂತಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply