LATEST NEWS
ಮಂಗಳೂರಿಗೆ ಆಗಮಿಸಿದ ಟಿಬೆಟಿಯನ್ ಧರ್ಮಗುರು ದಲಾಯಿಲಾಮ

ಮಂಗಳೂರಿಗೆ ಆಗಮಿಸಿದ ಟಿಬೆಟಿಯನ್ ಧರ್ಮಗುರು ದಲಾಯಿಲಾಮ
ಮಂಗಳೂರು ಅಗಸ್ಟ್ 29: ಟಿಬೆಟಿಯನ್ ಧರ್ಮಗುರು ದಲಾಯಿಲಾಮ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಪ್ರಥಮ ಬಾರಿಗೆ ಜಿಲ್ಲೆಗೆ ಆಗಮಿಸಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ದಲಾಯಿಲಾಮರವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ ಅರುಣಾಂಶುಗಿರಿ, ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗಡೆ ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕ ದಲಾಯಿಲಾಮ ಅವರನ್ನು ಸ್ವಾಗತಿಸಲಾಯಿತು. ದಲಾಯಿಲಾಮ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ನಗರದ ಖಾಸಗಿ ಹೋಟೆಲ್ ನಲ್ಲಿ ದಲಾಯಿಲಾಮ ಎರಡು ದಿನಗಳ ಕಾಲ ತಂಗಲಿದ್ದು, ಮಂಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆಗಸ್ಟ್ 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ನಯನ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವ ದಲಾಯಿಲಾಮ ಆಗಸ್ಟ್ 31 ರಂದು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.