Connect with us

    LATEST NEWS

    ನೂತನ ಸಂಸತ್ ಭವನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ ಐತಿಹಾಸಿಕ ನಿರ್ಣಯ: ಶಾಸಕ ಕಾಮತ್

    ಅನೇಕ ವರ್ಷಗಳ ಬೇಡಿಕೆಯಾಗಿದ್ದ ಮಹಿಳಾ ಮೀಸಲಾತಿ ಮಸೂದೆಯು ನೂತನ ಸಂಸತ್ ಭವನದಲ್ಲಿ ಮಂಡನೆಯಾಗಿದ್ದು ಇದೊಂದು ಐತಿಹಾಸಿಕ ನಿರ್ಣಯವಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹರ್ಷ ವ್ಯಕ್ತಪಡಿಸಿದರು.

    ಮಂಗಳೂರು : ಅನೇಕ ವರ್ಷಗಳ ಬೇಡಿಕೆಯಾಗಿದ್ದ ಮಹಿಳಾ ಮೀಸಲಾತಿ ಮಸೂದೆಯು ನೂತನ ಸಂಸತ್ ಭವನದಲ್ಲಿ ಮಂಡನೆಯಾಗಿದ್ದು ಇದೊಂದು ಐತಿಹಾಸಿಕ ನಿರ್ಣಯವಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹರ್ಷ ವ್ಯಕ್ತಪಡಿಸಿದರು.

    ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಶೇಕಡಾ 33ರಷ್ಟು ಸ್ಥಾನವನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂಬ ಉದ್ದೇಶ ಹೊಂದಿರುವ ಈ ಐತಿಹಾಸಿಕ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ.

    ಇದು ಕಾಯ್ದೆಯಾಗಿ ಜಾರಿಗೊಂಡಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ನೀತಿ ನಿರೂಪಣೆಯಲ್ಲಿ ಮಹಿಳೆಯರ ದೊಡ್ಡ ಮಟ್ಟದ ಪಾಲ್ಗೊಳ್ಳುವಿಕೆಗೆ ಸಹಕಾರಿಯಾಗಲಿದೆ.

    ಅನೇಕ ವರ್ಷಗಳ ಬೇಡಿಕೆಯಾಗಿದ್ದ ಈ ಮಸೂದೆಯ ಅಂಗೀಕಾರಕ್ಕೆ ರಾಜಕೀಯ ಪಕ್ಷಗಳ ಇಚ್ಛಾಶಕ್ತಿಯ ಕೊರತೆ ಕಾರಣವಾಗಿತ್ತು.

    ಇದೀಗ ಮಹಿಳಾ ಮೀಸಲಾತಿಯ ಬೇಡಿಕೆಯನ್ನು ಈಡೇರಿಸಲು ಮೋದಿ ಸರ್ಕಾರವೇ ಬರಬೇಕಾಯಿತು.

    ದೇಶದ ಎಲ್ಲಾ ತಾಯಂದಿರು ಹಾಗೂ ಸಹೋದರಿಯರ ಪರವಾಗಿ ನರೇಂದ್ರ ಮೋದಿಜೀ ನೇತೃತ್ವದ ಕೇಂದ್ರ ಸರ್ಕಾರಕ್ಕೆ ತುಂಬು ಹೃದಯದ ಧನ್ಯವಾದಗಳು ಎಂದು ಶಾಸಕರು ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply