ಹಿಟ್ ಆಂಡ್ ರನ್ ಕೇಸ್ ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಕಾರು ವಶಕ್ಕೆ

ಪುತ್ತೂರು ಫೆಬ್ರವರಿ 14:ಆರು ತಿಂಗಳ ಹಿಂದೆ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಕಡಬ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಕಾರು ಹಿಂದೂ ಮುಖಂಡರಾಗಿ ಪುತ್ತೂರಿನಲ್ಲಿ ಗುರುತಿಸಿಕೊಂಡಿರುವ ಅರುಣ್ ಕುಮಾರ್ ಪುತ್ತಿಲ ಎಂಬವರಿಗೆ ಸೇರಿದ್ದಾಗಿದೆ ಎಂದು ಕಡಬ ಪೋಲೀಸರು ತಿಳಿಸಿದ್ದಾರೆ.

ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಸಿ.ಸಿ ಕ್ಯಾಮರಾ ದೃಶ್ಯಗಳನ್ನು ಆಧಾರಿಸಿ ಪತ್ತೆಹಚ್ಚಲಾಗಿದ್ದು, ಪೊಲೀಸರು ಕೊನೆಗೂ ಪ್ರಕರಣವನ್ನು ಬೇಧಿಸಿದ್ದಾರೆ.

2019 ರ ಸೆಪ್ಟೆಂಬರ್ 9 ರಂದು ಸುಬ್ರಹ್ಮಣ್ಯ- ಕಡಬ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಮಹಿಳೆಗೆ ಡಿಕ್ಕಿ ಹೊಡೆದು ಕಾರು ಪರಾರಿಯಾಗಿತ್ತು. ತೀವೃವಾಗಿ ಗಾಯಗೊಂಡ ಮಹಿಳೆ ಸುಮತಿ (48) ಎಂಬವರು ಮೃತಪಟ್ಟಿದ್ದರು. ಇದೀಗ ಆರು ತಿಂಗಳುಗಳ ನಂತರ ವಾಹನವನ್ನು ಪೋಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರೆದಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Facebook Comments

comments