Connect with us

  LATEST NEWS

  ಅಪಘಾತವನ್ನು ನೋಡುತ್ತಿದ್ದವರ ಮೇಲೆ ಹರಿದ ಜಾಗ್ವಾರ್ ಕಾರು – 9 ಮಂದಿ ಸಾವು….!!

  ಅಹಮದಾಬಾದ್: ರಸ್ತೆ ಅಪಘಾತವನ್ನು ನೋಡುತ್ತಿದ್ದವರ ಮೇಲೆ ಜಾಗ್ವಾರ ಕಾರೊಂದು ಹರಿದ ಪರಿಣಾಮ 9 ಮಂದಿ ಸಾವನಪ್ಪಿ 13 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಅಹಮದಾಬಾದ್‌ನಲ್ಲಿ (Ahmedabad) ನಡೆದಿದೆ.

  ಸರ್ಖೇಜ್-ಗಾಂಧಿನಗರ ಹೆದ್ದಾರಿಯ ಇಸ್ಕಾನ್ ದೇವಸ್ಥಾನದ ಬಳಿಯ ಮೇಲ್ಸೇತುವೆಯಲ್ಲಿ ಗುರುವಾರ ಸಂಭವಿಸಿದ ಅಪಘಾತದಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಮಧ್ಯರಾತ್ರಿ 1 ಗಂಟೆಗೆ ಈ ಘಟನೆ ನಡೆದಿದ್ದು, ಪೊಲೀಸರು ಹಿಟ್‌ ಅಂಡ್‌ ರನ್‌ ಅಡಿ ಪ್ರಕರಣ ದಾಖಲಿಸಿದ್ದಾರೆ.


  ತಡರಾತ್ರಿ ಇಸ್ಕಾನ್ ಫ್ಲೈಓವರ್‌ನಲ್ಲಿ ಮಹೀಂದ್ರ ಥಾರ್ ವಾಹನವು ಡಂಪರ್ ಟ್ರಕ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ನಿಂತುಕೊಂಡು ಅಪಘಾತಗೊಂಡಿದ್ದ ವಾಹನಗಳನ್ನು ವೀಕ್ಷಿಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಜಾಗ್ವಾರ್ ಕಾರು ನಿಂತಿದ್ದವರ ಮೇಲೆ ಹರಿದಿದೆ. ಪರಿಣಾಮ ಇಬ್ಬರು ಪೊಲೀಸರು ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ.


  ಆಸ್ಪತ್ರೆಗೆ ಕರೆತರಲಾಗಿದ್ದ ಒಟ್ಟು 12 ಮಂದಿಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸೋಲಾ ಸಿವಿಲ್ ಆಸ್ಪತ್ರೆಯ ವೈದ್ಯಾಧಿಕಾರಿ ಕೃಪಾ ಪಟೇಲ್ ತಿಳಿಸಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply