ರಾಯಚೂರು, ಫೆಬ್ರವರಿ 28: ಟ್ರಕ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸಾವನಪ್ಪಿದ ಘಟನೆ ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ.

ಮೊಹಮ್ಮದ್ ಅಲಿ(24), ನೂರ್ ಮೊಹಮ್ಮದ್(19) ಮತ್ತಯ ಫಯಾಜ್(26) ಮೃತ ದುರ್ದೈವಿಗಳಾಗಿದ್ದಾರೆ. ಮೃತ ಮೂವರೂ ರಾಯಚೂರುನಗರದ ಸುಖಾಣಿ ಕಾಲೋನಿಯ ನಿವಾಸಿಗಳು ಎಂಬುದು ತಿಳಿದುಬಂದಿದೆ.
ಮೂವರು ಒಂದೇ ಬೈಕ್ ನಲ್ಲಿ ಯರಗೇರಾ ರಸ್ತೆಯಲ್ಲಿ ನಡೆಯುತ್ತಿರುವ ಕ್ರಿಕೆಟ್ ಟೂರ್ನಮೆಂಟ್ ನೋಡಿ ಮನೆಗೆ ಹಿಂತಿರುಗುವಾಗ ಹಿಂಬದಿಯಿಂದ ವೇಗವಾಗಿ ಬಂದ ಈಚರ್( ಮಿನಿ ಲಾರಿ) ಗುದ್ದಿದ ಪರಿಣಾಮ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ –ಟೇಕ್ಆಫ್ ಆದ ಕ್ಷಣಗಳಲ್ಲಿ ಬೊಲಿವಿಯನ್ ವಾಯುಪಡೆಯ ‘ಹರ್ಕ್ಯುಲಸ್’ ವಿಮಾನ ಪತನ -ರಸ್ತೆ ಮೇಲೆ ಹಣದ ಹೊಳೆ
ಅಪಘಾತದ ಬಳಿಕ ಟ್ರಕ್ ಸಮೇತ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ರಾಯಚೂರು ಟ್ರಾಫಿಕ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.