LATEST NEWS
ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ ಬಂಧನ

ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ ಬಂಧನ
ಪುತ್ತೂರು ಸೆಪ್ಟೆಂಬರ್ 29: ಸಂಪ್ಯ ಪೋಲೀಸ್ ಠಾಣಾಧಿಕಾರಿ ಅಬ್ದುಲ್ ಖಾದರ್ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎನ್ನುವ ಕಾರಣಕ್ಕೆ ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ ರನ್ನು ಪೋಲೀಸರು ಬಂಧಿಸಿದ್ದಾರೆ.
ಸೆಪ್ಟಂಬರ್ 15 ರಂದು ಪುತ್ತೂರಿನಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರತಿಭಟನೆಯಲ್ಲಿ ಜಗದೀಶ್ ಕಾರಂತ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಸಂಪ್ಯ ಪೋಲೀಸ್ ಠಾಣಾಧಿಕಾರಿಗೆ ಅವಹೇಳನಕಾರಿಯಾಗಿ ಹೇಳಕೆ ನೀಡಿದ್ದರು.
ಅಬ್ದುಲ್ ಖಾದರ್ ಅವರನ್ನು ತಲೆ ಬೋಳಿಸಿ ಕತ್ತೆ ಮೇಲೆ ಕುರಿಸಿ ಯಾಕೆ ಮೆರವಣಿಗೆ ಮಾಡಬಾರದು ಎನ್ನುವ ರೀತಿಯಲ್ಲಿ ಉದ್ರೇಕಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಪುತ್ತೂರು ನಗರ ಪೋಲೀಸರು ಪ್ರತಿಭಟನೆ ನಡೆದ ಒಂದು ವಾರದ ಬಳಿಕ ಸ್ವಯಂಪ್ರೇರಿತ ದೂರು ದಾಖಲಿಸಿದ್ದರು.

ಪೋಲೀಸ್ ಅಧಿಕಾರಿಯ ವಿರುದ್ಧ ಮಾತನಾಡಿದ ಜಗದೀಶ್ ಕಾರಂತರ ವಿರುದ್ಧ ಪ್ರಕರಣ ದಾಖಲಿಸುವಂತೆ ಗೃಹಸಚಿವ ರಾಮಲಿಂಗಾರೆಡ್ಡಿ ದಕ್ಷಿಣಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲೂ ಪೋಲೀಸರಿಗೆ ಸೂಚಿಸಿದ್ದರು. ಈ ಸಂಬಂಧ ಇಂದು ಬಿಹಾರದಲ್ಲಿ ಜಾಗರಣ ವೇದಿಕೆಯ ಬೈಠಕ್ ಮುಗಿಸಿ ಬೆಂಗಳೂರಿಗೆ ಆಗಮಿಸಿದ ಕಾರಂತರನ್ನು ದಕ್ಷಿಣಕನ್ನಡ ಜಿಲ್ಲಾ ಅಪರಾಧ ಪತ್ತೆದಳ ಬಂಧಿಸಿದೆ.
ಜಗದೀಶ ಕಾರಂತರ ವಿರುದ್ಧ ಪುತ್ತೂರಿನಲ್ಲಿ ಪ್ರಕರಣ ದಾಖಲಿಸಿರುವ ಹಿನ್ನಲೆಯಲ್ಲಿ ಅವರನ್ನು ಸಂಜೆ ವೇಳೆಗೆ ಪುತ್ತೂರಿಗೆ ಕರೆತರಲಿರುವ ಪೋಲೀಸರು, ಪುತ್ತೂರು ನ್ಯಾಯಾಧೀಶರ ಮುಂದೆ ಪೋಲೀಸರು ಹಾಜರುಪಡಿಸುವ ಸಾಧ್ಯೆತೆಯಿದೆ. ಈ ಹಿನ್ನಲೆಯಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆಗೆ ಸಿದ್ದತೆ ನಡೆಸಿದ್ದು, ಈ ನಡುವೆ ಕಾರಂತರನ್ನು ಕರೆ ತರುವ ಸಂದರ್ಭ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಸೇರುವ ಸಾದ್ಯತೆ ಇದೆ.