ಹಿಂದೂ ಜಾಗರಣ ವೇದಿಕೆ ಮುಖಂಡರ ಗಡಿಪಾರಿಗೆ ನೋಟಿಸ್
ಮಂಗಳೂರು ಸೆಪ್ಟೆಂಬರ್ 26: ಕಲ್ಲಡ್ಕ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ ಶೆಟ್ಟಿ ಅವರಿಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ ಜಿ ಜಗದೀಶ್ ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ ಶೆಟ್ಟಿ ಅವರಿಗೆ ಜಿಲ್ಲೆಯಿಂದ ಗಡಿಪಾರು ಮಾಡಬಾರದೇಕೆ ಎಂದು ಪ್ರಶ್ನಿಸಿ ನೋಟಿಸ್ ಜಾರಿ ಮಾಡಿದ್ದಾರೆ.
ಕರ್ನಾಟಕ ಪೊಲೀಸ್ ಕಾಯ್ದೆಯಡಿ 1963 ಕಲಾಂ 55(ಎ) ಮತ್ತು (ಬಿ) ಯಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಏಕೆ ಗಡಿಪಾರು ಮಾಡಬಾರದಾಗಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.
ಜಿಲ್ಲಾಡಳಿತದ ಈ ನೋಟಿಸ್ ಹಿಂದೂ ಸಂಘಟನೆಗಳನ್ನು ಕೆರಳಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಗಡಿಪಾರು ನೋಟಿಸ್ ವಿರೋಧಿಸಿ ಅಕ್ಟೋಬರ್ 9 ರಂದು ಹಿಂದೂ ಜಾಗರಣಾ ವೇದಿಕೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
