Connect with us

DAKSHINA KANNADA

ಭಾರಿ ಮಳೆ, ದ.ಕ.ಜಿಲ್ಲೆಯಲ್ಲಿಂದು (ಜು.15) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಯಲ್ಲಿ  ದಕ್ಷಿಣ ಕನ್ನಡದ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.15ರ ಸೋಮವಾರ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಘೋಷಿಸಿದ್ದಾರೆ.

ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು.
ನೀರು ಇರುವ ತಗ್ಗು ಪ್ರದೇಶ, ಕರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.

ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

 

ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು.

 

ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು.

 

ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ನಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು..

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *